Ad Widget .

ಮಂಗಳೂರು: ರಾಜಕೀಯಕ್ಕೆ‌ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ನಿವೃತ್ತಿ!?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget .

ಇಂದು ಬೆಳಗ್ಗೆ ಮಂಗಳೂರು ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

Ad Widget . Ad Widget .

ಸಭೆಯಲ್ಲಿ ಎಲ್ಲರಿಗೂ ಸಿಹಿಹಂಚಿ ಮಾತನಾಡಿದ ಅವರು, ಪಕ್ಷ ನನಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಿದೆ, ಆದರೆ ನನ್ನ ನೇತೃತ್ವದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಾಗಿಲ್ಲ, ಪಕ್ಷ ನನ್ನ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ, ಹೀಗಾಗಿ ರಾಜಕೀಯದಲ್ಲಿ ಮುಂದುವರಿಯಬಾರದು ಎಂಬ ನಿರ್ಧಾರಕ್ಕೆ ಬಂದಿದ್ದೇನೆ ಎಂದರು.

ಈ ಹಿಂದೆಯೇ ರಾಜಕೀಯ ನಿವೃತ್ತಿ ಪಡೆಯಬೇಕೆಂದು ಯೋಚಿಸಿದ್ದೆ, ಈಗ ಕಾಲ ಪಕ್ಷವಾಗಿದೆ, ರಾಜಕೀಯ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಘೋಷಿಸಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *