ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಬಾಹ್ಯಾಕಾಶ ಸಚಿವಾಲಯದ ಹೊಸ ಮುಖ್ಯಸ್ಯರನ್ನಾಗಿ ವಿ ನಾರಾಯಣನ್ ಅವರನ್ನು ಕೇಂದ್ರ ಸರ್ಕಾರವು ನೇಮಿಸಿದೆ. ಅವರು ಜನವರಿ 14 ರಂದು ಪ್ರಸ್ತುತ ಇಸ್ರೋ ಮಹಾನಿರ್ದೇಶಕ ಎಸ್.ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರದ ಸಂಪುಟದ ನೇಮಕಾತಿ ಸಮಿತಿ ಅಧಿಸೂಚನೆಯನ್ನೂ ಹೊರಡಿಸಿದೆ.
ಜನವರಿ 14 ರಿಂದ ಎರಡು ವರ್ಷಗಳ ಕಾಲ ಅವರು ಸೇವೆ ಸಲ್ಲಿಸಲಿದ್ದಾರೆ. ವಿ ನಾರಾಯಣನ್ ಅವರು ಸುಮಾರು 40 ವರ್ಷಗಳ ಅನುಭವ ಹೊಂದಿದ್ದಾರೆ. ಅವರು ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು ರಾಕೆಟ್ ಮತ್ತು ಬಾಹ್ಯಾಕಾಶ ನೌಕೆ ಪ್ರೊಪಲ್ನನ್ನಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಅವರು GSLV Mk Ill ವಾಹನದ C25 ಕ್ರಯೋಜೆನಿಕ್ ಯೋಜನೆಯ ಯೋಜನಾ ನಿರ್ದೇಶಕರಾಗಿದ್ದರು.