Ad Widget .

ನಕ್ಸಲರ ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ – ಸುನಿಲ್ ಕುಮಾರ್| ಅಮಿತ್ ಶಾ ನಕ್ಸಲರಿಗೆ ಪ್ಯಾಕೇಜ್ ನೀಡಿದಾಗ ಬೆಚ್ಚಿಬೀಳಲಿಲ್ಲವೇ? ಸಿಎಂ ಪ್ರಶ್ನೆ

ಸಮಗ್ರ ನ್ಯೂಸ್: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Ad Widget . Ad Widget .

ಚಿಕ್ಕಮಗಳೂರಿನಲ್ಲಿ ಬುಧವಾರ(ಜ8) ಆರು ಮಂದಿ ನಕ್ಸಲರು ಶರಣಾಗುವ ಮುನ್ನ ಸುನಿಲ್ ಕುಮಾರ್ ಅವರು ಎಕ್ಸ್ ಪೋಸ್ಟ್ ಮಾಡಿ ಅಸಮಾಧಾನ ಹೊರ ಹಾಕಿದ್ದಾರೆ. ”ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ?ಎಂಬುದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

Ad Widget . Ad Widget .

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯ ನವರೇ?ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ?ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಮಿತ್ ಶಾ ಪ್ಯಾಕೇಜ್ ನೀಡಿದಾಗ ಬೆಚ್ಚಿ ಬೀಳಲಿಲ್ಲವೇ – ಸಿಎಂ:
ಇದೇ ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ, ಕಳೆದ ತಿಂಗಳು ಛತ್ತೀಸ್‌ಗಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಭಾಷ್ಪ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಕ್ಸಲರ ಶರಣಾಗತಿ ಕುರಿತು ಪ್ರಶ್ನಿಸಿದ್ದ ಬಿಜೆಪಿಗರಿಗೆ ಪತ್ರಿಕಾ ಹೇಳಿಕೆ ಮೂಲಕ ಪ್ರತ್ಯುತ್ತರ ಕೊಟ್ಟಿರುವ ಸಿಎಂ, ಅಮಿತ್‌ ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್‌ ಕುಮಾರ್‌ ಅವರಿಗೆ ಇದೆಯೇ? ಪ್ರಶ್ನಿಸಿದ್ದಾರೆ. ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್‌ ದಂಪತಿಗೆ ಅಲ್ಲಿನ ಬಿಜೆಪಿ ಸರಕಾರದ ಉಪಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್‌ 41 ಲಕ್ಷ ರೂ.ನೆರವು ನೀಡಿರುವುದು ಶಾಸಕ ಸುನೀಲ್‌ ಕುಮಾರ್‌ಗೆ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಇದೆಯೇ? ಎಂದು ಪ್ರಶ್ನಿಸಿದರು.

ಶರಣಾಗಿರುವ ಈ ನಕ್ಸಲಿಯರು ಅನುಸರಿಸಿದ ಹಿಂಸಾ ಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ, ಇವರಲ್ಲಿ ಯಾರೊಬ್ಬರೂ ಜನರ ತೆರಿಗೆ ಹಣ ನುಂಗಿದ ಭ್ರಷ್ಟರೂ ಅಲ್ಲ. ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *