Ad Widget .

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ!;ಮಹತ್ವದ ಆದೇಶ ನೀಡಿದ ಕೋರ್ಟ್‌!

ಸಮಗ್ರ ನ್ಯೂಸ್ : ಬೆಳ್ಳಾರೆಯ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.

Ad Widget . Ad Widget .

ಇದೀಗ ಈ ಪ್ರಕರಣ ಹೊಸದೊಂದು ತಿರುವನ್ನು ಪಡೆದುಕೊಂಡಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀ‌ರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪುತ್ತೂರಿನ ಒಳಮೊಗ್ರು ಗ್ರಾಮದ ನಿವಾಸಿ ಮೂವತ್ತೆರಡು ವರ್ಷದ ಜಾಬೀರ್ ಜಾಮೀನು ತಿರಸ್ಕೃತಗೊಂಡ ಆರೋಪಿಯಾಗಿದ್ದಾನೆ.

Ad Widget . Ad Widget .

ಈತನ ಹಿನ್ನೆಲೆ ಎಂದರೆ ನಿಷೇಧಿತ ಪಿಎಫ್‌ಐ ಸಂಘಟನೆ ಹಾಗೂ ಎಸ್ಟಿಪಿಐ ಪಕ್ಷದ ಮುಖಂಡನಾಗಿದ್ದ. ಎನ್‌ಐಎ ನ್ಯಾಯಾಲಯ 2023 ರ ಫೆಬ್ರವರಿ 9ರಂದು ಈತನ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ವಿಜಯ್ ಕುಮಾರ್ ಎ ಪಾಟೀಲ್ ಅವರ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆಸಿ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತ್ತು.ಇದರ ನಂತರ ಆರೋಪಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ. ಆದರೂ ಏನೂ ಪ್ರಯೋಜನವಾಗಲಿಲ್ಲ. ಅಲ್ಲಿಯೂ ಜಾಮೀನು ತಿರಸ್ಕೃತಗೊಂಡಿದೆ.

Leave a Comment

Your email address will not be published. Required fields are marked *