ಸಮಗ್ರ ನ್ಯೂಸ್: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜ.10ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈ ಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಅಪಘಾತದ ಸಂದರ್ಭ ಲಾರಿಯ ಅಡಿಭಾಗದಲ್ಲಿ ಬೈಕ್ ಸಿಲುಕಿಕೊಂಡಿದ್ದು ಈ ವೇಳೆ ಬೈಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಲಾರಿ ಬೆಂಕಿಗಾಹುತಿಯಾಗಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರ ಪಣಿಯೂರು ಮೂಲದ ರವಿ ಆಚಾರ್ಯ ಎಂದು ತಿಳಿದು ಬಂದಿದ್ದು, ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಕೇರಳ ಮೂಲದ ಲಾರಿ ಇದಾಗಿದ್ದು, ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ತೀವ್ರತೆಗೆ ಲಾರಿ ಹಾಗೂ ದ್ವಿಚಕ್ರ ವಾಹನ ಸುಟ್ಟು ಕರಕಲಾಗಿದೆ. ಉಡುಪಿ ಅಗ್ನಿಶಾಮಕದಳ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆದಿದೆ.