ಸಮಗ್ರ ನ್ಯೂಸ್: ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ, ವೆಂಕಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ದೀಪಾ (35) ಸಾವನ್ನಪ್ಪಿದ ಮಹಿಳೆ.
ದೀಪಾ ಸಕಲೇಶಪುರ ತಾಲೂಕಿನ ವೀರಶೈವ ಸಮಾಜದ ಯುವ ವೇದಿಕೆ ಅಧ್ಯಕ್ಷ ಶಶಿಕುಮಾರ್ ಅವರ ಪತ್ನಿ. ದೀಪಾ ಹಾನುಬಾಳು ಹೋಬಳಿ ವೆಂಕಟಹಳ್ಳಿ ಗ್ರಾಮದವರೆಂದು ತಿಳಿದುಬಂದಿದೆ.
ದೀಪಾರವರು ಸ್ನಾನ ಮಾಡುತ್ತಿದ್ದ ವೇಳೆ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದದ್ದು ಬಳಿಕ ಸಕಲೇಶಪುರ ತಾಲ್ಲೂಕಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ದೀಪಾರವರು ಪತಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದು ಮನೆಯಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.