ಸಮಗ್ರ ನ್ಯೂಸ್: ಸಂಕ್ರಾಂತಿ ಬಳಿಕ ಕರ್ನಾಟಕದಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜನವರಿ 15-16ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಐಎಂಡಿ ಸೂಚನೆ ನೀಡಿದೆ.
ಇನ್ನೂ ಉತ್ತರ ಒಳನಾಡಿನಲ್ಲಿ ಹವಾಮಾನದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಗದಗ, ಹಾವೇರಿ, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ. ಜೊತೆಗೆ ಈ ಪ್ರದೇಶದಲ್ಲಿ ಚಳಿ ಕೂಡ ಹೆಚ್ಚಾಗಲಿದೆ.
ಮಲೆನಾಡಿಗೆ ಹೊಂದಿಕೊಂಡಿರುವ ಕರಾವಳಿ ಜಿಲ್ಲೆಗಳ ಭಾಗಗಳಲ್ಲೂ ಅಲ್ಲಲ್ಲಿ ಸಾಧಾರಣದಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.