ಸಮಗ್ರ ನ್ಯೂಸ್: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಸಂಸದರು ಹಾಗೂ 4 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಮುತ್ಸದ್ದಿ ಎಂ.ಶ್ರೀನಿವಾಸ್ ವಿಧಿವಶರಾಗಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಲಾಗಿದ್ದ ಶ್ರೀನಿವಾಸ್ ಅವರು, ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ. ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತ ಶ್ರೀನಿವಾಸ್ ರ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ನಾಳೆ ಉತ್ತರಹಳ್ಳಿಯಲ್ಲಿ ನಡೆಯಲಿದೆ.