ಸಮಗ್ರ ನ್ಯೂಸ್: ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀ ಅವರು ಇದೇ ಮೊದಲ ಬಾರಿಗೆ ಯಕ್ಷಗಾನ ರಂಗ ಪ್ರವೇಶ ಮಾಡಲಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ 125 ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಲ್ಲದೇ ನಾಟಕ ರಂಗದಲ್ಲಿ ನಟಿಸಿ ಹೆಸರುಗಳಿಸಿರುವ ಉಮಾಶ್ರೀ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಚೆಂಡೆಯ ಪೆಟ್ಟಿಗೆ ಹೆಜ್ಜೆ ಹಾಕಲಿದ್ದಾರೆ.
ಹೊನ್ನಾವರದ ಸೇಂಟ್ ಅಂಥೋನಿ ಮೈದಾನದಲ್ಲಿ ಶುಕ್ರವಾರ ಪೆರ್ಡೂರು ಅನಂತ ಪದ್ಮನಾಭ ಯಕ್ಷಗಾನ ಮಂಡಳಿಯ ಶ್ರೀರಾಮ ಪಟ್ಟಾಭಿಷೇಕ, ಮಾಯಮೃಗಾವತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಈ ಯಕ್ಷಗಾನದಲ್ಲಿ ನಟಿ ಉಮಾಶ್ರೀ ಅವರು ಮಂಥರೆಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಇವರೊಂದಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಕಾರ್ತಿಕ್ ಚಿಟ್ಟಾಣಿ, ಉದಯ್ ಹೆಗಡೆ, ಅಪ್ಟಣ್ಣ ಗೌಡ ಮಾಗೋಡು ಸೇರಿದಂತೆ ಹಲವು ಪ್ರಸಿದ್ಧ ಕಲಾವಿದರು ಭಾಗಿಯಾಗಲಿದ್ದಾರೆ.