ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಘಟ್ಟ ಭಾಗದಲ್ಲಿ ನಡೆದಿದೆ.
ಅಪಘಾತದಲ್ಲಿ 9 ಮಂದಿ ಮೃತಪಟ್ಟು, 15 ಕ್ಕೂ ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಪ್ರಯಾಣಿಸುತ್ತಿದ್ದರು. ಮೃತರು ಹಾವೇರಿ ಭಾಗದವರು ಎಂದು ತಿಳಿದು ಬಂದಿದೆ. ಸವಣೂರಿನಿಂದ ಕುಮಟಾಗೆ ಲಾರಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.