ರೇಣುಕಾಚಾರ್ಯ ಕೊಲೆ ಪ್ರಕರಣ| ದರ್ಶನ್ ಮತ್ತು‌ ಗ್ಯಾಂಗ್ ಗೆ ಸುಪ್ರೀಂ ನೋಟೀಸ್

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ನಿಂದ ನಟ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳು ರೆಗುಲರ್ ಪಡೆದುಕೊಂಡು ಬಿಡುಗಡೆಯಾಗಿದ್ದರು. ಆದರೆ ರಾಜ್ಯ ಸರ್ಕಾರ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ 7 ಆರೋಪಿಗಳ ವಿರುದ್ಧ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು ಇಂದು ಸುಪ್ರೀಂಕೋರ್ಟ್ ನಲ್ಲಿ ಇದೀಗ ಈ ಒಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Ad Widget ... ..

ವಿಚಾರಣೆ ಆರಂಭವಾದಾಗ ಹೈ ಕೋರ್ಟ್ ಜಾಮೀನು ನೀಡಿದೆ. ಹಾಗಾಗಿ ಜಾಮೀನು ರದ್ದು ಮಾಡಬೇಕು ಎಂದು ಸರ್ಕಾರದ ಪರ ವಕೀಲರಿಂದ ಕೋರ್ಟ್ ಗೆ ಮನವಿ ಮಾಡಲಾಯಿತು. ಈ ವೇಳೆ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಹೌದು ನಟ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ ಎಂದು ಇದೀಗ ತಿಳಿದು ಬಂದಿದೆ.

Ad Widget

ಪೊಲೀಸರು, ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ದರ್ಶನ್​ ಹಾಗೂ ಪ್ರಕರಣದ ಇತರೆ ಆರೋಪಿಗಳಾದ ಪವಿತ್ರಾ ಗೌಡ, ಜಗದೀಶ್‌, ಅನುಕುಮಾರ್‌, ನಾಗರಾಜ, ಎಂ ಲಕ್ಷ್ಮಣ್‌, ಪ್ರದೋಶ್‌ ನೀಡಲಾಗಿರುವ ಜಾಮೀನುನನ್ನು ಏಕೆ ರದ್ದು ಮಾಡಬೇಕು ಎಂದು 7 ಕಾರಣಗಳನ್ನು ನೀಡಿದೆ. ಇದೀಗ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Leave a Comment

Your email address will not be published. Required fields are marked *