ಚಾರ್ಮಾಡಿ ಘಾಟ್: ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ಭಾರೀ ಕಾಳ್ಗಿಚ್ಚು

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ.

. Ad Widget . Ad Widget . Ad Widget .

ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ರಸ್ತೆ ಬದಿ ಇದ್ದ ಬೆಂಕಿಯನ್ನಷ್ಟೇ ನಂದಿಸಲಾಗಿದ್ದು, ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡಿದರು. ಅಗ್ನಿಶಾಮಕ ಸಿಬ್ಬಂದಿ ಮಲ್ಲೇಶ್, ರಂಜಿತ್, ಮುತ್ತಪ್ಪ, ಅಶೋಕ್, ಮೋಹನ್‌ರಾಜ್ (ಚಾಲಕ) ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಬೆಂಕಿಯ ಕೆನ್ನಾಲಿಗೆ 10 ಕಿ.ಲೋ ಮೀಟರ್ ದೂರಕ್ಕೂ ಕಾಣಿಸುತ್ತಿದೆ. ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಬೆಂಕಿ ಹೊತ್ತಿಕೊಂಡು ಎರಡು ಗಂಟೆ ಕಳೆದರೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಭಾಗದಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಪತ್ತು ಅಪಾರ ಪ್ರಮಾಣದಲ್ಲಿದೆ.

Leave a Comment

Your email address will not be published. Required fields are marked *