Ad Widget .

ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರಕಟ| ರಾಜ್ಯದ ಮೂವರಿಗೆ ಸಿಕ್ತು ಗೌರವ

ಸಮಗ್ರ ನ್ಯೂಸ್: ವಿವಿಧ ಕ್ಷೇತ್ರದ ಸಾಧಕರಿಕೆ ಕೊಡಮಾಡುವ ಭಾರತದ ಅತ್ಯುನ್ನತ ಗೌರವದ ಪೈಕಿ ಒಂದಾಗಿರುವ ಪದ್ಮಶ್ರೀ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದೆ. 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

Ad Widget . Ad Widget .

ಇದರಲ್ಲಿ ಕಲಬುರಗಿ ಮೂಲದ ಡಾ. ವಿಜಯಲಕ್ಷ್ಮಿ ದೇಶಮಾನೆ ಬಾಗಲಕೋಟೆ ಮೂಲದ ವೆಂಕಪ್ಪ ಅಂಬಾಜಿ ಸುಗತೇಕರ್ ಹಾಗೂ ಕೊಪ್ಪಳ ಮೂಲದ ಶತಾಯುಷಿ ಭೀಮವ್ವ ದೊಡ್ಡಬಾಳಪ್ಪ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಿದೆ.

Ad Widget . Ad Widget .

ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 2025ರ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ತೆರೆಮರೆಯ ಸಾಧಕರಿಗೆ ಕೇಂದ್ರ ಸರ್ಕಾರ ಈ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಭಾರತ ಮಾತ್ರವಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತೀಯ ಪರಂಪರೆಯಲ್ಲಿ ಸಾಧನೆ ಮಾಡಿದ ಹೀರೋಗಳಿಗೆ ಈ ಪ್ರಶಸ್ತಿಯನ್ನು ಪ್ರಕಟಿಸಿದ್ದಾರೆ.

ವೆಂಕಪ್ಪ ಸಂಬಾಜಿ ಸುಗತೇಕರ್‌: ಕರ್ನಾಟಕದ ಬಾಗಲಕೋಟೆ ನಿವಾಸಿಯಾದ ವೆಂಕಪ್ಪ ಅಂಬಾಜಿ ಸುಗತೇಕರ್ ಅವರು ಸಾವಿರಕ್ಕೂ ಅಧಿಕ ತತ್ವಪದ, ದೇವಿ ಪದ ಹಾಗೂ ಇತರ ವಿಷಯಗಳ ಮೇಲೆ ಪದಗಳನ್ನು ಹಾಡಿ ಕಟ್ಟುತ್ತಿದ್ದ ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ 110ನೇ ಮನ್‌ ಕೀ ಬಾತ್‌ ರೇಡಿಯೋ ಸರಣಿಯಲ್ಲೂ ಗುಣಗಾನ ಮಾಡಿದ್ದರು. ಭಾರತದ ಸಂಸ್ಕೃತಿ, ಗಾಯನಗಳಿಗೆ ಲಕ್ಷಾಂತರ ಜನ ಕೊಡುಗೆ ನೀಡಿದ್ದಾರೆ.

ಭೀಮವ್ವ ಶಿಳ್ಳೆಕ್ಯಾತ: ಭೀಮವ್ವ ಶಿಳ್ಳೇಕ್ಯಾತ ಇವರು ಸಾಂಪ್ರದಾಯಿಕ ಶಿಳ್ಳೇಕ್ಯಾತರ ಕುಟುಂಬದವರಾಗಿದ್ದು, ತೊಗಲುಗೊಂಬೆ ಕಲಾವಿದರಾಗಿ ನಿರಂತರವಾಗಿ 75 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪರದೆಯ ಹಿಂದೆ ಮಹಿಳಾ ಪಾತ್ರಗಳಿಗೆ ಧ್ವನಿ ತುಂಬುವ ಅಪರೂಪದ ಕಲಾವಿದೆಯಾದ ಶ್ರೀಮತಿ ಭೀಮವ್ವ ದೊಡ್ಡಬಾಳಪ್ಪ ಅವರು ದೇಶ ವಿದೇಶಗಳಲ್ಲೂ ತಮ್ಮ ವೈವಿಧ್ಯಮಯ ತೊಗಲು ಗೊಂಬೆಯ ಪ್ರದರ್ಶನದಿಂದ ಪ್ರೇಕ್ಷಕರ ಮನಗೆದ್ದಿದ್ದಾರೆ.

ಡಾ. ವಿಜಯಲಕ್ಷ್ಮಿ ದೇಶಮಾನೆ: ಸುಮಾರು ಎರಡು ದಶಕಗಳಿಂದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳ ಆಶಾಕಿರಣವಾಗಿ, ಅವರ ನೋವಿನ ಉಪಶಮನಕ್ಕಾಗಿ ಹಾಗೂ ರೋಗನಿವಾರಣೆಗಾಗಿ ಶ್ರಮಿಸುತ್ತಿರುವವರು ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು. ಮೂಲತಃ ಗುಲ್ಬರ್ಗ ಜಿಲ್ಲೆಯಲ್ಲಿ ಜನಿಸಿದವರು.
ಡಾ. ವಿಜಯಲಕ್ಷ್ಮಿ ದೇಶಮಾನೆ ಅವರು ಎಂ.ಬಿ.ಬಿ.ಎಸ್, ಎಂ.ಎಸ್. (ಜನರಲ್ ಸರ್ಜರಿ). ಎಫ್.ಎ.ಐ.ಎಸ್. ಪದವಿ ಪಡೆದು ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿಯಲ್ಲಿ ಸರ್ಜರಿಯ ಪ್ರಾಧ್ಯಾಪಕರಾಗಿದ್ದಾರೆ.

Leave a Comment

Your email address will not be published. Required fields are marked *