ಶಿವಮೊಗ್ಗ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಸಾವು| ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ

ಸಮಗ್ರ ನ್ಯೂಸ್: ಶಿವಮೊಗ್ಗದ ಸಾಗರ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿ ಮಹಿಳೆ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ನಗರ ಹೋಬಳಿಯ ದುಬಾರತಟ್ಟೆ ನಿವಾಸಿ ಅಶ್ವಿನಿ (29) ಎಂದು ಗುರುತಿಸಲಾಗಿದೆ.

Ad Widget ... ..

ಶಿವಮೊಗ್ಗ ಜಿಲ್ಲೆಯ ನಗರ ಹೋಬಳಿಯ ದುಬಾರತಟ್ಟೆ ಗ್ರಾಮದ ಮಹಿಳೆ ಅಶ್ವಿನಿ ಜ.26 ರಂದು ಸಾಗರ ಉಪ ವಿಭಾಗ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ವೈದ್ಯರು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವಪ್ಪಿದ್ದಾರೆ.

Ad Widget

ಮೃತ ಮಹಿಳೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಎಂಸಿಎ ಸ್ನಾತಕೊತ್ತರ ಪದವಿಯಲ್ಲಿ ಗೋಲ್ಡ್ ಮೆಡಲ್ ಪಡೆದಿದ್ದರು. ಇದೀಗ ವೈದ್ಯರ ವಿರುದ್ಧ ಕುಟುಂಬಸ್ಥರು ಚಿಕಿತ್ಸಾ ನಿರ್ಲಕ್ಷ್ಯದ ಆರೋಪ ಹೊರಿಸಿದ್ದು, ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *