ಮಹಾ ಕುಂಭದಲ್ಲಿ ಕಾಲ್ತುಳಿತ| ಸಾವಿನ ಸಂಖ್ಯೆ ‌ಮತ್ತಷ್ಟು ಏರಿಕೆ| ಇಂದಿನ ಅಮೃತ ಸ್ನಾನ ಮುಂದೂಡಿಕೆ

ಸಮಗ್ರ ನ್ಯೂಸ್: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂದಿನ ಅಮೃತ ಸ್ನಾನವನ್ನು ರದ್ದು ಮಾಡಲಾಗಿದೆ ಎಂದು ಅಖಾಡ ಪರಿಷತ್ ತಿಳಿಸಿದೆ.

. Ad Widget . Ad Widget

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ ಉಂಟಾಗಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

. Ad Widget . . Ad Widget . Ad Widget

13 ಅಖಾಡಗಳಿಂದ ಇಂದಿನ ಪುಣ್ಯಸ್ನಾನ ಮುಂದೂಡಿಕೆ ಮಾಡಲಾಗಿದ್ದು, ವಸಂತಿ ಪಂಚಮಿಯಂದು ಪುಣ್ಯಸ್ನಾನ ಮಾಡಲು ನಿರ್ಧರಿಸಲಾಗಿದೆ.

ಕೋಟ್ಯಂತರ ಭಕ್ತರು ಪುಣ್ಯ ಸ್ನಾನಕ್ಕಾಗಿ ಆಗಮಿಸಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿ ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸದ್ಯ 17 ಮೃತದೇಹಗಳು ಪತ್ತೆಯಾಗಿವೆ.

ಗಾಯಗೊಂಡವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿದ್ದಾರೆ. ಗಾಯಾಳುಗಳಿಗೆ ಕೂಡಲೇ ಚಿಕಿತ್ಸೆ ಕೊಡಿಸುವಂತೆ ಸೂಚನೆ ನೀಡಿದ್ದಾರೆ. ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ತಿಳಿಸಿದ್ದಾರೆ.

Leave a Comment

Your email address will not be published. Required fields are marked *