Ad Widget .

ವ್ಯರ್ಥವಾದ ವರುಣ್ ಚಕ್ರವರ್ತಿ ಹೋರಾಟ| ಇಂಗ್ಲೆಂಡ್ ವಿರುದ್ಧ ಮಕಾಡೆ ಮಲಗಿದ ಭಾರತ

ಸಮಗ್ರ ನ್ಯೂಸ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟೀಮ್ ಇಂಡಿಯಾ 26 ರನ್ ಅಂತರದ ಸೋಲಿಗೆ ಶರಣಾಗಿದೆ. ಆದರೂ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಬಳಗ ಗೆಲುವು ಸಾಧಿಸಿತ್ತು.

Ad Widget . Ad Widget . Ad Widget .

ಮತ್ತೊಂದೆಡೆ ಹ್ಯಾಟ್ರಿಕ್ ಸೋಲನ್ನು ತಪ್ಪಿಸಿರುವ ಆಂಗ್ಲರ ಪಡೆ ಸರಣಿಯನ್ನು ಜೀವಂತವಾಗಿರಿಸಿಕೊಂಡಿತು. ಇಂಗ್ಲೆಂಡ್ ಒಡ್ಡಿದ 172 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಒಂಬತ್ತು ವಿಕೆಟ್ ನಷ್ಟಕ್ಕೆ 145 ರನ್ ಗಳಿಸಲಷ್ಟೇ ಸಾಧ್ಯವಾಯಿತು.

Ad Widget .

ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ‘ಮಿಸ್ಟರಿ’ ಸ್ಪಿನ್ನರ್ ವರುಣ್ ಚಕ್ರವರ್ತಿ ಎರಡನೇ ಸಲ ಐದು ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

ಆದರೆ ಕಾಕತಾಳೀಯ ಎಂಬಂತೆ ಎರಡನೇ ಸಲವೂ ಭಾರತ ಸೋಲಿಗೆ ಶರಣಾಗಿದೆ. ಈ ಪಂದ್ಯದಲ್ಲಿ ವರುಣ್ ನಾಲ್ಕು ಓವರ್‌ಗಳಲ್ಲಿ 24 ರನ್ ಬಿಟ್ಟುಕೊಟ್ಟು ಐದರ ಗೊಂಚಲು ಪಡೆದರು.

ಕಳೆದ ವರ್ಷ ನವೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲೂ ವರುಣ್ ಐದು ವಿಕೆಟ್ ಸಾಧನೆ ಮಾಡಿದ್ದರು. ಅಂದು ಕೂಡ ಭಾರತ ಸೋಲನುಭವಿಸಿತ್ತು.

ಭಾರತದ ಸೋಲಿನ ಹೊರತಾಗಿಯೂ ವರುಣ್ ಅರ್ಹವಾಗಿಯೇ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು. ಅಲ್ಲದೆ ಪ್ರಸಕ್ತ ಸಾಗುತ್ತಿರುವ ಸರಣಿಯಲ್ಲಿ ವಿಕೆಟ್ ಬೇಟೆಯಲ್ಲಿ ಮುನ್ನಡೆಯಲ್ಲಿದ್ದಾರೆ. ಮೂರು ಪಂದ್ಯಗಳಲ್ಲಿ ಒಟ್ಟು 10 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಇಂಗ್ಲೆಂಡ್‌ ಪರ ಅರ್ಧಶತಕ ಸಿಡಿಸಿದ ಬೆನ್ ಡಕೆಟ್ ಗರಿಷ್ಠ ಸ್ಕೋರರ್‌ ಎನಿಸಿಕೊಂಡರು. 28 ಎಸೆತಗಳನ್ನು ಎದುರಿಸಿದ ಆರಂಭಿಕ ಬ್ಯಾಟರ್ 51 ರನ್ ಗಳಿಸಿದರು. ಮತ್ತೋರ್ವ ಆರಂಭಿಕ ಬ್ಯಾಟರ್‌ ಫಿಲ್‌ ಸಾಲ್ಟ್‌ ಕೇವಲ 5 ರನ್‌ ಗಳಿಸಿ ಔಟಾಗುವ ಮೂಲಕ ಮತ್ತೆ ನಿರಾಶೆ ಮೂಡಿಸಿದರು. ಆದರೆ, ಎರಡನೇ ವಿಕೆಟ್‌ಗೆ ಬಟ್ಲರ್‌ ಹಾಗೂ ಡಕೆಟ್‌ ಅರ್ಧಶತಕದ (76 ರನ್) ಜೊತೆಯಾಟವಾಡಿದರು. 24 ರನ್‌ ಗಳಿಸಿದ್ದ ಬಟ್ಲರ್‌ ಔಟಾಗುತ್ತಿದ್ದಂತೆಯೇ ತಂಡದ ಪೆವಿಲಿಯನ್‌ ಪರೇಡ್‌ ಆರಂಭವಾಯ್ತು. ಈ ನಡುವೆ ಆರ್‌ಸಿಬಿ ಆಟಗಾರ ಲಿಯಾಮ್ ಲಿವಿಂಗ್‌ಸ್ಟನ್‌ 24 ಎಸೆತಗಳಲ್ಲಿ ಭರ್ಜರಿ 43 ರನ್ ಸಿಡಿಸಿದರು. 5 ಸ್ಫೋಟಕ ಸಿಕ್ಸರ್ ಸಿಡಿಸಿ ತಂಡದ ಮೊತ್ತ ಹೆಚ್ಚಿಸಿದರು.

ಈ ನಡುವೆ ವರುಣ್ ಚಕ್ರವರ್ತಿ ಟಿ20 ಸ್ವರೂಪದಲ್ಲಿ ಎರಡನೇ ಬಾರಿಗೆ ಐದು ವಿಕೆಟ್ ಸಾಧನೆಯನ್ನು ಪೂರ್ಣಗೊಳಿಸಿದರು. ಆದರೆ, ಈ ಎರಡೂ ಪಂದ್ಯಗಳಲ್ಲಿ ಭಾರತ ಸೋತಿದೆ. ಉಳಿದಂತೆ ಹಾರ್ದಿಕ್‌ ಪಾಂಡ್ಯ 1 ವಿಕೆಟ್‌ ಪಡೆದರು. 14 ತಿಂಗಳ ಬಳಿಕ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ಮೊಹಮ್ಮದ್‌ ಶಮಿ ವಿಕೆಟ್‌ ಪಡೆಯಲು ಸಾಧ್ಯವಾಗಲಿಲ್ಲ.

Leave a Comment

Your email address will not be published. Required fields are marked *