Ad Widget .

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ರೇಡ್| ಹಲವು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ

ಸಮಗ್ರ ನ್ಯೂಸ್: ಭ್ರಷ್ಟಾಚಾರ, ತೆರಿಗೆ ವಂಚನೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳಗ್ಗೆಯೇ ಹಲವು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು, ರಾಯಚೂರು, ಬಾಗಲಕೋಟೆ, ಬೆಳಗಾವಿ ಸೇರಿದಂತೆ ಹಲವೆಡೆ ದಾಳಿ ನಡೆದಿದೆ.

Ad Widget . Ad Widget . Ad Widget .

ಬೆಂಗಳೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಮಿಕ್ಕಂತೆ ಬೆಳಗಾವಿಯಲ್ಲಿ ಎರಡು ಕಡೆ, ಚಿತ್ರದುರ್ಗ, ರಾಯಚೂರು ಹಾಗೂ ಬಾಗಲಕೋಟೆಯಲ್ಲಿ ಸೇರಿದಂತೆ ಒಟ್ಟಾರೆ ಏಳು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.

Ad Widget .

ಲೋಖಾಯುಕ್ತ ಡಿವೈಎಸ್‌ಪಿ ಸಿದ್ದೇಶ್‌ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬಾಗಲಕೋಟೆಯಲ್ಲಿ ಗ್ರಾಪಂ ಪಿಡಿಒ ಎಸ್‌ಪಿ ಹಿರೇಮಠ, ರಾಯಚೂರಿನಲ್ಲಿ ಜಿ.ಪಂ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಹ ರಾವ್‌ ಗುಜ್ಜರ್‌ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ.

ಆರೋಪಿ ಅಧಿಕಾರಿಗಳ ವಿರುದ್ದ ಹಲವು ದಿನಗಳ ಹಿಂದೆಯೇ ದೂರು ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದರು. ನಿನ್ನೆ ರಾತ್ರಿಯಿಂದಲೇ ದಾಳಿಗೆ ಸಿದ್ದತೆ ಮಾಡಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಮುಂಜಾನೆಯೇ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಸಧ್ಯಕ್ಕೆ ದಾಳಿ ನಡೆಸಿರುವ ಅಧಿಕಾರಿಗಳ ಮನೆಯ ಸುತ್ತುಲೂ ಪೊಲೀಸರ ಭದ್ರತೆ ಏರ್ಪಡಿಸಲಾಗಿದ್ದು, ಅಕ್ರಮ ಆಸ್ತಿಗಳು, ಚಿನ್ನಾಭರಣ, ಕಪ್ಪುಹಣ, ಹಾಗೂ ಅವರ ಬ್ಯಾಂಕ್‌ ಖಾತೆಯ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

Leave a Comment

Your email address will not be published. Required fields are marked *