February 2025

ಇಂದೇ ಮುಖ್ಯವಾಹಿನಿಗೆ ಕೋಟೆಹೊಂಡ ರವೀಂದ್ರ| ರಾಜ್ಯದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಶರಣಾಗುವ ಸಾಧ್ಯತೆ

ಸಮಗ್ರ ನ್ಯೂಸ್: ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ಇಲ್ಲ ರವೀಂದ್ರ ಇಂದೇ ಮುಖ್ಯವಾನಿಗೆ ಬರಲಿದ್ದಾರೆ. ಇದರಿಂದ ಕರ್ನಾಟಕವು ನಕ್ಸಲ್ ನಿಂದ ಮುಕ್ತವಾಗಲಿದೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಈ ತಂಡದಿಂದ […]

ಇಂದೇ ಮುಖ್ಯವಾಹಿನಿಗೆ ಕೋಟೆಹೊಂಡ ರವೀಂದ್ರ| ರಾಜ್ಯದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಶರಣಾಗುವ ಸಾಧ್ಯತೆ Read More »

ಅಮೇರಿಕಾದಲ್ಲಿ ‌ಮತ್ತೊಂದು ವಿಮಾನ ದುರಂತ| ಶಾಪಿಂಗ್ ಮಾಲ್ ಮೇಲೆ ಬಿದ್ದ ಲಘುವಿಮಾನ

ಸಮಗ್ರ ನ್ಯೂಸ್: ಅಮೆರಿಕದ ಫಿಲಡೆಲ್ಫಿಯಾದಲ್ಲಿ ಶನಿವಾರ (ಭಾರತೀಯ ಕಾಲಮಾನ) ಲಘು ವಿಮಾನ ಅಪಘಾತಕ್ಕೀಡಾಗಿದೆ. ವಾಷಿಂಗ್ಟನ್‌ ವಿಮಾನ ದುರಂತದ ನೆನಪು ಮಾಸುವ ಮುನ್ನವೇ ಯುಎಸ್‌ನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಶಾಪಿಂಗ್‌ ಮಾಲ್‌ ಮೇಲೆ ವಿಮಾನ ಬಿದ್ದು ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಶನಿವಾರ (ಫೆ.1) ಬೆಳಗಿನ ಜಾವ ಫಿಲಡೆಲ್ಫಿಯಾದ ಶಾಪಿಂಗ್ ಮಾಲ್ ಬಳಿ ವಿಮಾನ ಅಪಘಾತಕ್ಕೀಡಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಹಲವಾರು ಮನೆಗಳು ಬೆಂಕಿಗೆ ಆಹುತಿಯಾಗಿದ್ದು, ಸಾವುನೋವು ಸಂಭವಿಸುವ ಸಾಧ್ಯತೆ ಇದೆ. ಕನಿಷ್ಠ ಇಬ್ಬರು ಪ್ರಯಾಣಿಕರನ್ನು ಹೊತ್ತ ವಿಮಾನವು

ಅಮೇರಿಕಾದಲ್ಲಿ ‌ಮತ್ತೊಂದು ವಿಮಾನ ದುರಂತ| ಶಾಪಿಂಗ್ ಮಾಲ್ ಮೇಲೆ ಬಿದ್ದ ಲಘುವಿಮಾನ Read More »

ರಾಜ್ಯಸರ್ಕಾರದಿಂದ ಗ್ರಾಮೀಣ ಜನರಿಗೆ ಗುಡ್ ನ್ಯೂಸ್| ಗ್ರಾ.ಪಂಚಾಯತ್ ಸೇವೆಗಳು ಈಗ ವಾಟ್ಸ್ಯಾಪ್ ನಲ್ಲಿ ಲಭ್ಯ| ಹೇಗೆ ಪಡೆದುಕೊಳ್ಳೋದು? ಇಲ್ಲಿದೆ ಪೂರ್ಣ ವಿವರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ. ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಕುಂದು-ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು

ರಾಜ್ಯಸರ್ಕಾರದಿಂದ ಗ್ರಾಮೀಣ ಜನರಿಗೆ ಗುಡ್ ನ್ಯೂಸ್| ಗ್ರಾ.ಪಂಚಾಯತ್ ಸೇವೆಗಳು ಈಗ ವಾಟ್ಸ್ಯಾಪ್ ನಲ್ಲಿ ಲಭ್ಯ| ಹೇಗೆ ಪಡೆದುಕೊಳ್ಳೋದು? ಇಲ್ಲಿದೆ ಪೂರ್ಣ ವಿವರ Read More »

ಇಂದು‌(ಫೆ.1) ಕೇಂದ್ರ ಬಜೆಟ್ | ಹಲವು ಕ್ಷೇತ್ರಗಳಲ್ಲಿ ಗರಿಗೆದರಿದ ನಿರೀಕ್ಷೆ

ಸಮಗ್ರ ನ್ಯೂಸ್: ಬಹುನಿರೀಕ್ಷೆಯ ಕೇಂದ್ರ ಸರ್ಕಾರದ 2025-2026ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಇಂದು ಬೆಳಗ್ಗೆ 11ಗಂಟೆಗೆ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಬಡವರು, ಮಧ್ಯಮ ವರ್ಗದವರು, ಕೃಷಿ ವಲಯ ಸೇರಿದಂತೆ ವಿವಿಧ ವಲಯಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿವೆ. ಕೇಂದ್ರ ವಿತ್ತ ಸಚಿವೆ ಎಂಟನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ. ಕೇಂದ್ರ ಬಜೆಟ್ ಮೇಲೆ ಭಾರೀ ನಿರೀಕ್ಷೆಗಳು ಇವೆ. 140 ಕೋಟಿ ಭಾರತೀಯರ ಕನಸುಗಳು ಈಡೇರಿಸುವ ಹಂಬಲ

ಇಂದು‌(ಫೆ.1) ಕೇಂದ್ರ ಬಜೆಟ್ | ಹಲವು ಕ್ಷೇತ್ರಗಳಲ್ಲಿ ಗರಿಗೆದರಿದ ನಿರೀಕ್ಷೆ Read More »