ಪ್ರತಿಭಟನೆ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು| ಮಾ.7ರವರೆಗೆ ಗಡುವು ವಿಸ್ತರಣೆ

ಸಮಗ್ರ ನ್ಯೂಸ್: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಕೈಬಿಟ್ಟಿದ್ದಾರೆ.

Ad Widget ... ..

ಕಳೆದ 5 ದಿನಗಳಿಂದ ಸಾವಿರಾರು ಅಂಗನವಾಡಿ ನೌಕರರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದರು. ತಮ್ಮ ಬೇಡಿಕೆ ಈಡೇರಿಕೆಗೆ ಮಾ.7 ರವರೆಗೆ ಗಡುವು ಕೊಟ್ಟು ಪ್ರತಿಭಟನೆ ಹಿಂಪಡೆಯಲಾಗಿದೆ.

Ad Widget

ಮಾ-7ರ ಒಳಗಾಗಿ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಮೊನ್ನೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೋಟಿಸ್ ಕೊಟ್ಟರೂ ಪ್ರತಿಭಟನೆ ನಿಲ್ಲಿಸಿರಲಿಲ್ಲ . ಸರ್ಕಾರಕ್ಕೆ ಚಾಲೆಂಜ್ ಹಾಕಿ ಪ್ರತಿಭಟನೆ ನಡೆಸಲಾಗಿತ್ತು. ಈಗ ಅಂತಿಮವಾಗಿ ಗಡುವು ಕೊಟ್ಟು ಪ್ರತಿಭಟನೆ ಕೈ ಬಿಡಲಾಗಿದೆ.

Leave a Comment

Your email address will not be published. Required fields are marked *