Ad Widget .

ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ ಸೀಸನ್​ 11 ರ ಸ್ಪರ್ಧಿಯಾಗಿ ರಾಜ್ಯಾದ್ಯಂತ ಸಖತ್ ಫೇಮಸ್ ಆಗಿದ್ದ ಗೋಲ್ಡ್ ಸುರೇಶ್ ಆಸ್ಪತ್ರೆಗೆ ಅಡ್ಮಿಟ್‌ ಆಗಿದ್ದಾರೆ. ಗೋಲ್ಡ್ ಸುರೇಶ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗೋಲ್ಡ್ ಸುರೇಶ್ ಆಸ್ಪತ್ರೆಯಲ್ಲಿ ಮಲಗಿರುವ ಫೋಟೋ ಹಾಗೂ ವಿಡಿಯೋ ವೈರಲ್‌ ಆಗಿವೆ.

Ad Widget . Ad Widget . Ad Widget .

ಗೋಲ್ಡ್ ಸುರೇಶ್ ಅವರು ಕಾಲು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೇ ಗೋಲ್ಡ್ ಸುರೇಶ್ ಕಾಲಿಗೆ ಏಟಾಗಿತ್ತು. ಟಾಸ್ಕ್ ಆಡುವಾಗ ಪೆಟ್ಟು ಬಿದ್ದಿತ್ತು. ಕಾಲು ನೋವು ಹೆಚ್ಚಾಗಿದ್ದರಿಂದ ಗೋಲ್ಡ್ ಸುರೇಶ್ ಅವರಿಗೆ ಸರ್ಜರಿ ಅಗತ್ಯ ಇದೆ ಎಂದು ವೈದ್ಯರು ಸಲಹೆ ನೀಡಿದ್ದಾರಂತೆ.

Ad Widget . Ad Widget .

ಈ ಹಿನ್ನೆಲೆ ಗೋಲ್ಡ್ ಸುರೇಶ್ ಖಾಸಗಿ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿಸಿದ್ದಾರೆ. ಎರಡು ದಿನಗಳ ಬಳಿಕ ಅವರು ಗೋಲ್ಡ್ ಸುರೇಶ್ ಡಿಸ್ಚಾರ್ಜ್​ ಆಗಿ ಮನೆಗೆ ವಾಪಸ್‌ ಬರುವ ನಿರೀಕ್ಷೆಯಿದೆ. ಡಿಸ್ಚಾರ್ಜ್‌ ಬಳಿಕ ಒಂದೂವರೆ ತಿಂಗಳು ಗೋಲ್ಡ್ ಸುರೇಶ್ ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ಹೇಳಿದ್ದಾರೆ.

ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರ ಟಫ್‌ ಕಾಂಪಿಟೇಟರ್‌ಗಳಲ್ಲಿ ಒಬ್ಬರಾಗಿದ್ದ ಗೋಲ್ಡ್ ಸುರೇಶ್ ಅವರು ಸಾಕಷ್ಟು ಪೈಪೋಟಿ ನೀಡಿದ್ದರು. ಅನಿವಾರ್ಯ ಕಾರಣಗಳಿಂದ ಗೋಲ್ಡ್ ಸುರೇಶ್ ಬಿಗ್ ಬಾಸ್ ಆಟವನ್ನು ಅರ್ಧಕ್ಕೆ ಬಿಟ್ಟು ಬರಬೇಕಾಯಿತು.

Leave a Comment

Your email address will not be published. Required fields are marked *