ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕಡಬ ತಾಲೂಕು ಪಂಚಾಯತ್ ಮತ್ತು ಅಲಂಕಾರು ಗ್ರಾಮ ಪಂಚಾಯತ್‌ಗಳಿಗೆ 2023-24 ನೇ ಸಾಲಿನ ರಾಜ್ಯ ಮಟ್ಟದ ನರೇಗಾ ಪ್ರಶಸ್ತಿಗಳು ಲಭಿಸಿರುವುದು ಅತ್ಯಂತ ಹೆಮ್ಮೆಯ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಮನ್ನಣೆಯು ಮಾನವ ಕೆಲಸದ ದಿನಗಳನ್ನು ಹೆಚ್ಚಿಸುವಲ್ಲಿ ಅತ್ಯುತ್ತಮ, ಮಹಿಳೆಯರ ಭಾಗವಹಿಸುವಿಕೆ, ಕೂಲಿ ಪಾವತಿ, ಕಾಮಗಾರಿ ಮುಕ್ತಾಯಗೊಳಿಸುವಿಕೆ, ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳು ಮತ್ತು ಆಡಳಿತದಲ್ಲಿ ಗಮನಾರ್ಹ ಪ್ರಗತಿಗೆ ಸಾಕ್ಷಿಯಾಗಿದೆ ಎಂದಿದ್ದಾರೆ.
ಇಂತಹ ಗಮನಾರ್ಹ ಸಾಧನೆಗಾಗಿ ಶ್ರಮಿಸಿದ ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂದಪಟ್ಟ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.