ಸಮಗ್ರ ನ್ಯೂಸ್: ದಕ್ಷಿಣಕನ್ನಡದಲ್ಲಿ ವಿವಿಧ ಶಾಲೆಗಳಲ್ಲಿ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಸೋಂಕು ದೃಢಪಟ್ಟಿದೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ಒಂದೇ ತಾಲೂಕಿನ ವಿವಿಧ ಶಾಲೆಗಳಲ್ಲಿ ಒಟ್ಟು 21 ಮಕ್ಕಳಿಗೆ ಈ ಒಂದು ಚಿಕನ್ ಪಾಕ್ಸ್ ದೃಢಪಟ್ಟಿದೆ. ಹಾಗಾಗಿ ಮಕ್ಕಳ ಪೋಷಕರಲ್ಲಿ ಇದೀಗ ಆತಂಕ ಮನೆ ಮಾಡಿದೆ.
ರೋಗ ಹರಡಿರುವ ಶಾಲೆಗಳ ಆಡಳಿತ ಮಂಡಳಿಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ. ರೋಗ ಕಡಿಮೆಯಾಗುವವರೆಗೂ ಮಕ್ಕಳಿಗೆ ರಜೆ ನೀಡುವಂತೆ ಮತ್ತು ಮಕ್ಕಳನ್ನು ಶಾಲೆಗೆ ಕಳುಹಿಸದಂತೇ ಶಾಲೆಗಳಿಗೆ ಮತ್ತು ಪೋಷಕರಿಗೆ ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ವಿನಂತಿ ಮಾಡಿದ್ದಾರೆ.
ಆರೋಗ್ಯ ಇಲಾಖೆಯಿಂದ ದೊರೆತ ಮಾಹಿತಿ ಅನ್ವಯ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು ಒಂಬತ್ತು ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು, ಲಾವತ್ತಡ್ಕದಲ್ಲಿ ಒಂದು, ಗೋಳಿತ್ತೊಟ್ಟುವಿನಲ್ಲಿ ಒಂದು, ಕುಕ್ಕೆ ಸುಬ್ರಹ್ಮಣ್ಯದ ಶಾಲೆಯ 6 ಮಕ್ಕಳಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್ಪಾಕ್ಸ್ ಹರಡಿರುವ ಬಗ್ಗೆ ಪ್ರಸ್ತುತ ಮಾಹಿತಿ ಲಭ್ಯವಾಗಿದೆ.