ದ.ಕ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಚಿಕನ್ ಪಾಕ್ಸ್ ಹಾವಳಿ| ಆತಂಕದಲ್ಲಿ ಪೋಷಕರು

ಸಮಗ್ರ ನ್ಯೂಸ್: ದಕ್ಷಿಣಕನ್ನಡದಲ್ಲಿ ವಿವಿಧ ಶಾಲೆಗಳಲ್ಲಿ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಸೋಂಕು ದೃಢಪಟ್ಟಿದೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ಒಂದೇ ತಾಲೂಕಿನ ವಿವಿಧ ಶಾಲೆಗಳಲ್ಲಿ ಒಟ್ಟು 21 ಮಕ್ಕಳಿಗೆ ಈ ಒಂದು ಚಿಕನ್ ಪಾಕ್ಸ್ ದೃಢಪಟ್ಟಿದೆ. ಹಾಗಾಗಿ ಮಕ್ಕಳ ಪೋಷಕರಲ್ಲಿ ಇದೀಗ ಆತಂಕ ಮನೆ ಮಾಡಿದೆ.

. Ad Widget . Ad Widget . Ad Widget .

ರೋಗ ಹರಡಿರುವ ಶಾಲೆಗಳ ಆಡಳಿತ ಮಂಡಳಿಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ. ರೋಗ ಕಡಿಮೆಯಾಗುವವರೆಗೂ ಮಕ್ಕಳಿಗೆ ರಜೆ ನೀಡುವಂತೆ ಮತ್ತು ಮಕ್ಕಳನ್ನು ಶಾಲೆಗೆ ಕಳುಹಿಸದಂತೇ ಶಾಲೆಗಳಿಗೆ ಮತ್ತು ಪೋಷಕರಿಗೆ ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ವಿನಂತಿ ಮಾಡಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಆರೋಗ್ಯ ಇಲಾಖೆಯಿಂದ ದೊರೆತ ಮಾಹಿತಿ ಅನ್ವಯ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು ಒಂಬತ್ತು ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು, ಲಾವತ್ತಡ್ಕದಲ್ಲಿ ಒಂದು, ಗೋಳಿತ್ತೊಟ್ಟುವಿನಲ್ಲಿ ಒಂದು, ಕುಕ್ಕೆ ಸುಬ್ರಹ್ಮಣ್ಯದ ಶಾಲೆಯ 6 ಮಕ್ಕಳಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್​ಪಾಕ್ಸ್ ಹರಡಿರುವ ಬಗ್ಗೆ ಪ್ರಸ್ತುತ ಮಾಹಿತಿ ಲಭ್ಯವಾಗಿದೆ.

Leave a Comment

Your email address will not be published. Required fields are marked *