ಸಮಗ್ರ ನ್ಯೂಸ್. ಚಲಿಸುತ್ತಿದ್ದ ಬೈಕ್ ಮೇಲೆ ಹಾಲು ಮಡ್ಡಿ (ಧೂಪ) ಮರ ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ(ಫೆ.4) ಸಂಜೆ ನಡೆದಿದೆ.
ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಅದಾದ ಬಳಿಕ ಸಾರ್ವಜನಿಕರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಒತ್ತಾಯಿಸಿದ್ದರು.
ಇದೀಗ ಮತ್ತೆ ಅಂತಹುದೇ ಘಟನೆ ದುರ್ಘಟನೆ ಸಂಭವಿಸಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.