Ad Widget .

ಮಹಾಕುಂಭದಲ್ಲಿಂದು ಪ್ರಧಾನಿ ಮೋದಿ ಪುಣ್ಯ ಸ್ನಾನ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪುಣ್ಯಸ್ನಾನ ಮಾಡಲಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಮುಳುಗೇಳುವ ಸಲುವಾಗಿ ಮೋದಿ ಇಂದು ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ.

Ad Widget . Ad Widget . Ad Widget .

ಮಹಾಕುಂಭಮೇಳಕ್ಕೆ ಆಗಮಿಸುವವರಿಗೆ ಕಲ್ಪಿಸಿರುವ ವ್ಯವಸ್ಥೆಗಳನ್ನು ಪರಿಶೀಲಿಸಲಿರುವ ಪ್ರಧಾನಿ ಬಳಿಕ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪ್ರಧಾನಿ ಜೊತೆಗಿರುತ್ತಾರೆ. ಕೆಲವು ಪ್ರಮುಖ ಅಖಾಡಗಳ ಸಾಧು ಸಂತರೊಂದಿಗೂ ಮೋದಿ ಸಂವಾದ
ನಡೆಸಲಿದ್ದಾರೆ.

Ad Widget . Ad Widget .

ಬೆಳಗ್ಗೆ 10 ಗಂಟೆಗೆ ಪ್ರಯಾಗ್‌ರಾಜ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಮೋದಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಅರೈಲ್‌ಘಾಟ್‌ಗೆ ಆಗಮಿಸಿ ಅಲ್ಲಿಂದ ಬೋಟ್‌ ಮೂಲಕ ತ್ರಿವೇಣಿ ಸಂಗಮಕ್ಕೆ ತೆರಳಿ ಪುಣ್ಯಸ್ನಾನ ಮಾಡಲಿದ್ದಾರೆ.
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಸಾಕಷ್ಟು ತಯಾರಿ ಮಾಡಲಾಗಿದೆ. ಪ್ರಧಾನಿ ಪುಣ್ಯಸ್ನಾನ ಮಾಡುವ ಕೆಲಹೊತ್ತು ಜನಸಾಮಾನ್ಯರಿಗೆ ಸ್ನಾನಕ್ಕೆ ಅವಕಾಶ ನೀಡಲಾಗುವುದಿಲ್ಲ.

ನಿತ್ಯ ಕೋಟಿಗಟ್ಟಲೆ ಜನರು ಮಹಾಕುಂಭಮೇಳಕ್ಕೆ ಆಗಮಿಸುತ್ತಿರುವುದರಿಂದ ಪ್ರಧಾನಿಯ ಭದ್ರತೆ ಕೂಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಹಾಕುಂಭಮೇಳದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಆದರೆ ಜನಸಾಮಾನ್ಯರಿಗೆ ಹೆಚ್ಚಿನ ಅಡಚಣೆಯಾಗದಂತೆ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಸರಕಾರ ಹೇಳಿದೆ.

Leave a Comment

Your email address will not be published. Required fields are marked *