ಬಸ್ – ಬೈಕ್ ನಡುವೆ ಭೀಕರ ಅಪಘಾತ| ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವು; ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೂವರು ಪುಟಾಣಿ ಮಕ್ಕಳ ಸಹಿತ ಒಂದೇ ಕುಟುಂಬದ ಐವರು ಮೃತಪಟ್ಟ ದಾರುಣ ಘಟನೆ ಸುರಪುರ ತಾಲೂಕಿನ ತಿಂಥಣಿ ಬಳಿ ಮಧ್ಯಾಹ್ನ ಸಂಭವಿಸಿದೆ. ತಿಂಥಣಿ ಗ್ರಾಮದ ಕಮಾನ್ ಬಳಿ ಶ್ರೀರಂಗಪಟ್ಟಣ- ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

Ad Widget ... ..

ಲಿಂಗಸೂಗೂರು ಕಡೆಯಿಂದ ಚಿಂಚೋಳಿ ಕಡೆಗೆ ಹೊರಟಿದ್ದ ಖಾಸಗಿ ಬಸ್ಸೊಂದು ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಲ್ಲಿ ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

Ad Widget

ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಬೈಕಿನಲ್ಲಿದ್ದ ಮೂವರು ಮಕ್ಕಳು ಮತ್ತು ಅವರ ತಂದೆ, ತಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

Leave a Comment

Your email address will not be published. Required fields are marked *