Ad Widget .

ಮಂಜೇಶ್ವರ: ಬಸ್ ನಲ್ಲಿ ಕಳ್ಳತನ ಮಾಡಿದ ಮೂವರು ಮಹಿಳೆಯರ ಬಂಧನ

ಸಮಗ್ರ ನ್ಯೂಸ್: ಬಸ್ಸಿನಲ್ಲಿ ಪ್ರಯಾಣಿಕರ ಹಣ ಹಾಗೂ ಮೊಬೈಲ್ ಫೋನ್ ಕಳವುಗೈದ ಆರೋಪದಲ್ಲಿ ಮೂವರು ಮಹಿಳೆಯರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget . Ad Widget . Ad Widget .

ಮಂಗಳವಾರ ಮಧ್ಯಾಹ್ನ ಕರ್ನಾಟಕ ಸಾರಿಗೆ ನಿಗಮದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕುಂಜತ್ತೂರಿನ ತಾರಾಮಣಿ ಎಂಬವರ ಮೊಬೈಲ್ ಫೋನ್, ಎಂಟು ಸಾವಿರ ರೂ.ನಗದು ಒಳಗೊಂಡ ಬ್ಯಾಗನ್ನು ಕಳವಾಗಿತ್ತು. ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿತ್ತು.

Ad Widget . Ad Widget .

ಈ ಹಿನ್ನೆಲೆಯಲ್ಲಿ ವಿವಿಧ ಸ್ಥಳ ಗಳಲ್ಲಿನ ಸಿಸಿಟಿವಿ ಕ್ಯಾಮರಾಗಳನ್ನು ಕೇಂದ್ರೀಕರಿಸಿ ನಡೆಸಿದ ತನಿಖೆಯಂತೆ ಪೊಲೀಸರು ಶಂಕಿತ ಮೂವರು ಮಹಿಳೆಯರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ವಶದಲ್ಲಿರುವ ಮಹಿಳೆಯರು ತಮಿಳುನಾಡು ಮೂಲದವರೆಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *