ಸಮಗ್ರ ನ್ಯೂಸ್: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ.
ಬಿಗಿ ಭದ್ರತೆಯ ನಡುವೆ 19 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.
ಇನ್ನು ಕಲ್ಕಾಜಿ ಕ್ಷೇತ್ರದ ಎಎಪಿ ಅಭ್ಯರ್ಥಿಯೂ ಆಗಿರುವ ದೆಹಲಿ ಸಿಎಂ ಅತಿಶಿಯವರು ಮಹಾರಾಣಿ ಬಾಗ್‌ನಲ್ಲಿರುವ ಮೀರಾಬಾಯಿ ಡಿಎಸ್‌ಇಯು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ.
ಮತ ಎಣಿಕೆ ಕೇಂದ್ರದಲ್ಲೇ ತೀವ್ರ ಆತಂಕಕ್ಕೆ ಒಳಗಾಗಿರುವ ಅತಿಶಿಯವರು ಪದೇ ಪದೇ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಎಎಪಿ ನಾಯಕರು ಆತಂಕಕ್ಕೀಡಾಗಲು ಎಕ್ಸಿಟ್ ಪೋಲ್ಗಳೇ ಕಾರಣ ಎನ್ನಲಾಗುತ್ತಿದ್ದು, ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ಇನ್ನೊಂದು ಕಡೆ ಬಿಜೆಪಿ ಪಾಳಯದಲ್ಲಿ ಸಂತಸ ಮನೆಮಾಡಿದ್ದು, ಈ ಸಂತೋಷ ಮಧ್ಯಾಹ್ನದ ಮೇಲೆಯೂ ಮುಂದುವರೆಯಲಿದೆಯಾ ಎಂಬುದನ್ನು ಕಾದುನೋಡಬೇಕಿದೆ.