ಸಮಗ್ರ ನ್ಯೂಸ್: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಹೀನಾಯವಾಗಿ ಸೋಲನಭುವಿಸಿದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ಮರ್ಲೇನಾ ರಾಜೀನಾಮೆ ನೀಡಿದ್ದಾರೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರನ್ನು ಭೇಟಿಯಾದ ನಿರ್ಗಮಿತ ಸಿಎಂ ಆತಿಶಿ ಮರ್ಲೇನಾ ಬಳಿಕ ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲನುಭವಿಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 27 ವರ್ಷಗಳ ಬಳಿಕ ಬಿಜೆಪಿ ದೆಹಲಿ ಗದ್ದುಗೆ ಏರಲಿದೆ.