ಸಮಗ್ರ ನ್ಯೂಸ್: ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.
ಜನಪದ ಕೋಗಿಲೆ ಎಂದೇ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ ವಯೋಸಹಜ ಕಾಯಿಲೆಗಳಿಂದಾಗಿ ವಿಧಿವಶರಾಗಿದ್ದಾರೆ.
ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿದ ಇವರು ವಿದ್ಯಾಭ್ಯಾಸ ಮಾಡದಿದ್ದರೂ ಹಾಲಕ್ಕಿ ಜನಾಂಗದ ಜನಪದ ಹಾಡುಗಳನ್ನು ಹಾಡುವ ಮೂಲಕ ಹಳ್ಳಿ ಸೊಗಡನ್ನು ದಿಲ್ಲಿಗೆ ಕೊಂಡೊಯ್ದಿದ್ದರು.
ಇದಲ್ಲದೇ ಮದ್ಯ ಮುಕ್ತ ಗ್ರಾಮ ಮಾಡುವ ಹೋರಾಟದಲ್ಲಿ ಭಾಗಿಯಾದ ಇವರು ತಮ್ಮ ಊರನ್ನು ಮದ್ಯ ಮುಕ್ತ ಗ್ರಾಮವನ್ನಾಗಿಸಿದರು. 2017ರಲ್ಲಿ ಇವರ ಜನಪದ ಹಾಡಿನ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.