ಸಮಗ್ರ ನ್ಯೂಸ್: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಬಾಣಂತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತಹ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ.
ವಿರಾಜಪೇಟೆ ತಾಲೂಕಿನ ಕರಡ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶೀಲಾ ದಂಪತಿ ಪುತ್ರಿ ಕೊಟ್ಟೋಳಿ ಗ್ರಾಮದ ನಿವಾಸಿ, ಎಂಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದ ಬಾಣಂತಿ.
ಕಾವೇರಮ್ಮ ಹಾಗೂ ದಿನೇಶ್ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. 14 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದಳು.
ಬುಧವಾರ ಪತಿ ದಿನೇಶ್ ಮನೆ ಹತ್ತಿರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಮನೆಯಿಂದ ಮಗು ಅಳುವ ಸದ್ದು ಕೇಳಿಸಿದೆ. ಮಗುವಿನ ಕೂಗಾಟ ನಿಲ್ಲದೇ ಹೋಗಿದ್ದರಿಂದ ಮನೆಗೆ ಬಂದು ನೋಡಿದಾಗ ಕಾವೇರಮ್ಮ ಸ್ನಾನಗೃಹದಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಮಹಿಳೆ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.