Ad Widget .

ದೆಹಲಿಯಲ್ಲಿ ರೈಲು ಏರುವ ಧಾವಂತದಲ್ಲಿ ಕಾಲ್ತುಳಿತ| ಪ್ರಯಾಗರಾಜ್ ಗೆ ತೆರಳುತ್ತಿದ್ದ ಭಕ್ತರ ಸಾವು

ಸಮಗ್ರ ನ್ಯೂಸ್: ಮಹಾಕುಂಭ ಮೇಳಕ್ಕೆಂದು ತೆರಳುತ್ತಿದ್ದ ಜನ ದೆಹಲಿ ರೈಲು ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಸಾವನ್ನಪ್ಪಿದ ದುರಂತ ಘಟನೆ ಕಳೆದ ದಿನ ರಾತ್ರಿ ಸಂಭವಿಸಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಮಹಾ ಕುಂಭಮೇಳಕ್ಕೆ ಎರಡು ರೈಲುಗಳು ವಿಳಂಬವಾಗಿದ್ದರಿಂದ ಶನಿವಾರ ರಾತ್ರಿ ಜನದಟ್ಟಣೆ ಉಂಟಾಗಿ 11 ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಿಂದಾಗಿ ಪ್ರಧಾನಿ ಮೋದಿ ಸೇರಿದಂತೆ ಇತರ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget . Ad Widget . Ad Widget . Ad Widget .

ಘಟನೆಯಲ್ಲಿ 10 ಮಹಿಳೆಯರು, ಮೂವರು ಮಕ್ಕಳು ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೇಡಿ ಹಾರ್ಡಿಂಗ್ ಆಸ್ಪತ್ರೆಯಿಂದ ಇನ್ನೂ ಮೂರು ಸಾವುಗಳು ವರದಿಯಾಗಿವೆ. ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Ad Widget . Ad Widget .

ಉತ್ತರಪ್ರದೇಶದ ಪ್ರಯಾಗ್‌ರಾಜ್‌ ಮಹಾ ಕುಂಭಮೇಳಕ್ಕೆ ಹೋಗಲು ಎರಡು ರೈಲುಗಳು ತಡವಾಗಿ ಬಂದಿವೆ. ಇದರಿಂದಾಗಿ ದೆಹಲಿ ರೈಲು ನಿಲ್ದಾಣದಲ್ಲಿ ಜನ ಸಂಖ್ಯೆ ಹೆಚ್ಚಾಗಿತ್ತು. ವಾರಾಂತ್ಯವಾಗಿದ್ದರಿಂದ ರೈಲು ನಿಲ್ದಾಣದಲ್ಲಿ ಕುಂಭ ಮೇಳಕ್ಕೆ ಹೋಗುವ ಭಕ್ತರ ಸಂಖ್ಯೆ ಹೆಚ್ಚಾಗಿದೆ.

ಪ್ರಯಾಗ್‌ರಾಜ್ ಮೂಲಕ ಹಾದುಹೋಗುವ ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಮತ್ತು ಭುವನೇಶ್ವರ ರಾಜಧಾನಿ ರೈಲುಗಳು ನಿಲ್ದಾಣಕ್ಕೆ ಬರುವುದು ವಿಳಂಬವಾದೆ. ಈ ರೈಲುಗಳ ಪ್ರಯಾಣಿಕರು 12, 13 ಮತ್ತು 14, 15ನೇ ಪ್ಲಾಟ್‌ಫಾರ್ಮ್‌ಗಳಲ್ಲಿ ನಿಂತಿದ್ದರು.

ಆಗ ತಡವಾಗಿ ಪ್ರಯಾಗ್‌ರಾಜ್ ಎಕ್ಸ್‌ಪ್ರೆಸ್ ಪ್ಲಾಟ್‌ಫಾರ್ಮ್ ಸಂಖ್ಯೆ 14ಕ್ಕೆ ಬಂದಾಗ ಅನೇಕ ಜನರು ಅದರಲ್ಲಿ ಹತ್ತಲು ನುಗ್ಗಿದ್ದಾರೆ. ರೈಲು ತಡವಾಗಿ ಬಂದಿದ್ದರಿಂದ ರೈಲು ಹತ್ತಲು ನೂಕುನುಗ್ಗಲಾಗಿದೆ. ಇದರಿಂದಾಗಿ ರಾತ್ರಿ 8 ಗಂಟೆ ಸುಮಾರಿಗೆ ಕಾಲ್ತುಳಿತ ಉಂಟಾಗಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *