ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಎನ್.ಆರ್.ಪುರ ಭದ್ರಾ ನದಿಯಲ್ಲಿ ಈಜಲು ಹೋದ 25 ವರ್ಷದ ಯುವಕ ಜಲಾಲ್ ಸುಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಭದ್ರಾ ನದಿಗೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದನು. ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಡಿದರೂ ಸಾಧ್ಯವಾಗಲಿಲ್ಲ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದರು. ಆದರೆ ನಿನ್ನೆ ಸಂಜೆವರೆಗೂ ಶವ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು.
ಇಂದು ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ ಊಟಪುನರಾರಂಭಗೊಳ್ಳಲಿದೆ. ಈ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.