ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಅತ್ತೆ ಯಮುನಾ ಕುಡಿದ ಮತ್ತಿನಲ್ಲಿದ್ದ ಅಳಿಯನಿಗೆ ಬುದ್ದಿ ಹೇಳಿದ ಕಾರಣಕ್ಕೆ ಅವನ ಸಹೋದರ ಶಶಿಧರ್ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದೆ.
ಕೊಲೆ ಮಾಡಿದ ಬಳಿಕ ಶಶಿಧರ್ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಬಣಕಲ್ ಪೊಲೀಸರು ನಿನ್ನೆ ಮೊದಲು ತನಿಖೆ ಆರಂಭಿಸಿದ್ದರು. ಶಶಿಧರ್ ನನ್ನು ಪತ್ತೆ ಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರು. ಫೆ.18 ರಂದು ಭಾರತೀಬೈಲು ಕಾಫಿತೋಟದಲ್ಲಿ ಶಶಿಧರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ದುರ್ಘಟನೆ ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ.