Ad Widget .

ಚಿಕ್ಕಿಯಲ್ಲಿ ಹಾನಿಕಾರಕ ಅಂಶ ಪತ್ತೆ ಹಿನ್ನೆಲೆ| ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಚಿಕ್ಕಿ ವಿತರಣೆ ಇಲ್ಲ

ಸಮಗ್ರ ನ್ಯೂಸ್: ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶಗಳು ಪತ್ತೆಯಾಗಿದ್ದರ ಹಿನ್ನೆಲೆಯಲ್ಲಿ ಇದೀಗ ಶಿಕ್ಷಣ ಇಲಾಖೆಯ ಇನ್ನು ಮುಂದೆ ಸರಕಾರಿ ಶಾಲೆಗಳಲ್ಲಿ ಚಿಕ್ಕಿ ವಿತರಣೆ ಇಲ್ಲ ಎಂದು ತಿಳಿಸಿದೆ.

Ad Widget . Ad Widget . Ad Widget . Ad Widget .

ಕಲ್ಬುರ್ಗಿಯಲ್ಲಿ ಮಕ್ಕಳಿಗೆ ಕೊಟ್ಟ ಚಿಕ್ಕಿ ತಿನ್ನಲು ಯೋಗ್ಯವಾಗಿರಲಿಲ್ಲ. ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶ ಇದೀಗ ಚಿಕ್ಕಿಯಲ್ಲಿ ಪತ್ತೆಯಾಗಿದೆ. ಸಕ್ಕರೆ ಅಂಶ ಹೆಚ್ಚಿನ ಮಟ್ಟದಲ್ಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಈ ಸಂಬಂಧ ಇಲಾಖೆ ಹೆಚ್ಚುವರಿ ಆಯುಕ್ತರು ಪತ್ರ ಬರೆದಿದ್ದರು. ಹಾಗಾಗಿ ಮಕ್ಕಳಿಗೆ ಚಿಕ್ಕಿ ವಿತರಣೆ ಮಾಡಿದರೂ ಶಿಕ್ಷಣ ಇಲಾಖೆ ನಿರ್ಧರಿಸಿದೆ.

Ad Widget . Ad Widget .

ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಪಹಾರ ಯೋಜನೆಯಡಿ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಣೆ ಮಾಡಬೇಕು. ಚಿಕ್ಕಿ ವಿತರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.2022-23ನೇ ಸಾಲಿನಲ್ಲಿ ಪ್ರಧಾನಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ 1 ರಿಂದ 8ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು/ಚಿಕ್ಕಿಯನ್ನು ವಿತರಿಸಲು ಆದೇಶಿಸಲಾಗಿತ್ತು.

ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎನ್ನಬಹುದಾದ ಕೊಬ್ಬಿನಾಂಶ ಹೆಚ್ಚಿಗೆ ಇದೆ. ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಅಲ್ಲದೇ ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯಕ್ಕೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಚಿಕ್ಕಿ ವಿತರಣೆ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *