ಸಮಗ್ರ ನ್ಯೂಸ್: ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಘೋಷಿಸಿದೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಸಭೆಯು ವೀಕ್ಷಕರ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲಾಗಿದ್ದು, ಅಂತಿಮವಾಗಿ ಸಿಎಂ, ಡಿಸಿಎಂ ಹೆಸರು ಘೋಷಣೆ ಮಾಡಲಾಯಿತು. ನವದೆಹಲಿಯಲ್ಲಿರುವ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಾಳೆ (ಫೆ.20) ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾಗುವ ನಿರೀಕ್ಷೆಯಿದೆ.
ಶಾಸಕಿ ರೇಖಾ ಗುಪ್ತಾರನ್ನು ದೆಹಲಿಯ ನೂತನ ಸಿಎಂ ಆಗಿ ಬಿಜೆಪಿ ಇಂದು ಘೋಷಣೆ ಮಾಡಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನೆಲೆಯುಳ್ಳ ಅವರನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡಲಾಗಿದೆ.
ರೇಖಾ ಗುಪ್ತಾ ಅವರು ಸಾರ್ವಜನಿಕ ಸೇವಾ ಅನುಭವ ಹೊಂದಿರುವ ಬಗ್ಗೆ ಪಕ್ಷ ಹಾಗೂ ಆರ್ಎಸ್ಎಸ್ ವಲಯದಲ್ಲೂ ಉತ್ತಮ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಶಾಲಿಮಾರ್ ಬಾಗ್ ಕ್ಷೇತ್ರದಲ್ಲಿ ಎಎಪಿಯ ಅಭ್ಯರ್ಥಿ ವಂದನಾ ಕುಮಾರಿ ಅವರ ವಿರುದ್ಧ ರೇಖಾ ಅವರು ಗೆಲುವು ಸಾಧಿಸಿದ್ದಾರೆ. ಇನ್ನು ಪರ್ವೇಶ್ ವರ್ಯಾ ಅವರು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ನವದೆಹಲಿ ಕ್ಷೇತ್ರದಿಂದ ಗೆದ್ದಿದ್ದರು.