ಸಮಗ್ರ ನ್ಯೂಸ್: ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಖಾಸಗಿ ಬಸ್ ಒಂದು ಹರಿದು ಪಾದಯತ್ರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.
ಮೃತರು ಸುರೇಶ್ (60) ಮತ್ತು ಕುಮಾರ್ (55) ಎಂದು ತಿಳಿದುಬಂದಿದೆ. ಅಲ್ಲದೇ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆನಗೋಳ ಗ್ರಾಮದವರು,ಇನ್ನೂ ಗಂಭೀರವಾಗಿ ಗಾಯಗೊಂಡ ದಿನೇಶ್ ಗೆ ಹಾಸನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಕುರಿತು ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.