ಸಮಗ್ರ ನ್ಯೂಸ್: ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ.
43ನೇ ಓವರ್ನ ಮೂರನೇ ಎಸೆತದಲ್ಲಿ ಭರ್ಜರಿ ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ತಮ್ಮ ಶತಕವನ್ನು ಪೂರೈಸಿದರು. ಜೊತೆಗೆ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್ಗಳಲ್ಲಿ 241 ರನ್ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲ್ಔಟ್ ಆಗಿ ಭಾರತಕ್ಕೆ 242 ರನ್ಗಳ ಗುರಿಯನ್ನು ನೀಡಿತ್ತು.