ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆಯಾಗಿದೆ. ಈ ದುರ್ಘಟನೆಯಲ್ಲಿ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಬಹುತೇಕ ನಾಶವಾಗಿದ್ದು, ಹತ್ತಾರು ಮೂಟೆ ಕಾಫಿ ಬೀಜಗಳು ಕೂಡಾ ಬೆಂಕಿಗಾಹುತಿಯಾಗಿವೆ.
ಅಗ್ನಿ ಅವಘಡದ ಸಂದರ್ಭದಲ್ಲಿ ಮನೆಯಲ್ಲಿ ಇದ್ದ ರೇಖಾ (36) ತೀವ್ರವಾಗಿ ಗಾಯಗೊಂಡು ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಡಿಗೆ ಮಾಡಲು ಸ್ಟವ್ ಹಚ್ಚುವ ವೇಳೆ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು,ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೂಡಿಗೆರೆಯ ಮಾಳಿಗನಾಡು ಗ್ರಾಮದ ಸುನೀಲ್ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.