ಸಮಗ್ರ ನ್ಯೂಸ್: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ಮಹಾಶಿವರಾತ್ರಿಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾಮಹೋತ್ಸವ ನಡೆಯುತ್ತದೆ. ಈ ಜಾತ್ರೆಗೆ ಲಕ್ಷಾಂತರ ಭಕ್ತರು ತೆರಳುವುದರಿಂದ ವಾಹನ ದಟ್ಟಣೆ ಹೆಚ್ಚಾಗುತ್ತದೆ.
ಈ ಕಾರಣದಿಂದ ಫೆಬ್ರವರಿ 25 ರಿಂದ ಮಾರ್ಚ್ 1ರವರೆಗೆ ಐದು ದಿನಗಳ ಕಾಲ ಮಹದೇಶ್ವರಬೆಟ್ಟಕ್ಕೆ ದ್ವಿಚಕ್ರ, ಆಟೋ ರಿಕ್ಷಾ, ಗೂಡ್ಸ್ ವಾಹನ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಕೌದಳ್ಳಿ ಬಳಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಕೇವಲ ಕಾರು ಹಾಗೂ ಬಸ್ನಲ್ಲಿ ಮಾತ್ರ ಮಹದೇಶ್ವರ ಬೆಟ್ಟಕ್ಕೆ ತೆರಳಲು ಅವಕಾಶ ನೀಡಲಾಗಿದೆ.
ಇನ್ನೂ ವಿವಿಧ ಕಡೆಯಿಂದ ಕಾಡುಮೇಡು ಸುತ್ತಿ ಭಕ್ತರು ಮಾದಪ್ಪನ ಬೆಟ್ಟದತ್ತ ತೆರಳುತ್ತಿದ್ದಾರೆ. ಜಿಲ್ಲೆಯ ಗಡಿ ಭಾಗದಲ್ಲಿ ಹರಿಯುವ ಕಾವೇರಿ ನದಿ ದಾಟಿ ತೆರಳುತ್ತಿದ್ದಾರೆ. ನೀರಿನ ಸೆಳೆತ ಇರುವುದರಿಂದ ನದಿಯ ಎರಡೂ ದಡಗಳಿಗೆ ಹಗ್ಗ ಕಟ್ಟಿ ಹಗ್ಗ ಹಿಡಿದು ನದಿ ದಾಟಿ ಸಹಸ್ರಾರು ಭಕ್ತರು ಮಾದಪ್ಪನ ಸನ್ನಿಧಿ ತಲುಪುತ್ತಿದ್ದಾರೆ.