ಸಮಗ್ರ ನ್ಯೂಸ್: ಭಾರತದಲ್ಲಿ ಅತಿ ಹೆಚ್ಚು ಭೂಕಂಪ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಅಸ್ಸಾಂನಲ್ಲಿ ಇದೀಗ ಮತ್ತೊಮ್ಮೆ ಭೂಕಂಪನ ಸಂಭವಿಸಿದೆ.
ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೂಕಂಪದ ಅನುಭವವಾಗಿದೆ. ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1 ಎಂದು ದಾಖಲಾಗಿದೆ. ಗುವಾಹಟಿ ಮತ್ತು ರಾಜ್ಯದ ಇತರ ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಭೂಕಂಪನವು ಬೆಳಗಿನ ಜಾವ 2.25 ಕ್ಕೆ 16 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.