February 2025

ಪ್ರಯಾಗದಲ್ಲಿ‌‌ ಪುಣ್ಯ ಸ್ನಾನ ಮಾಡಿದ‌ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಇಂದು ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಪ್ರಯಾಗ್‌ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ಪವಿತ್ರ ಗಂಗಾ ಜಲಕ್ಕೆ ಅರ್ಥ್ಯ ಬಿಟ್ಟು ಸುತ್ತು ಬಂದು, ನೀರಿನ ಮಧ್ಯೆ ನಿಂತು ರುದ್ರಾಕ್ಷಿ ಮಾಲೆ ಹಿಡಿದುಕೊಂಡು ಧ್ಯಾನ ಮಾಡಿದರು. ಜ. 13 ರಿಂದ ಪ್ರಾರಂಭವಾದ ಮಹಾ ಕುಂಭಮೇಳವು ಫೆ. 26 ಮಹಾಶಿವರಾತ್ರಿಯವರೆಗೆ 44 ದಿನ ನಡೆಯಲಿದೆ. ಇದು ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೇಳವಾಗಿದ್ದು. ಪ್ರಪಂಚದಾದ್ಯಂತ ಭಕ್ತರನ್ನು […]

ಪ್ರಯಾಗದಲ್ಲಿ‌‌ ಪುಣ್ಯ ಸ್ನಾನ ಮಾಡಿದ‌ ಪ್ರಧಾನಿ ಮೋದಿ Read More »

ರಾಜ್ಯದಲ್ಲಿ‌ ಪೌತಿ ಖಾತೆ ಅಭಿಯಾನ| ಮನೆ ಬಾಗಿಲಿಗೇ ಬಂದು ನೋಂದಣಿ ಪ್ರಕ್ರಿಯೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಜಮೀನುಗಳ ಖಾತೆಗಳು ಇನ್ನೂ ನಿಧನ ಹೊಂದಿದವರ ಹೆಸರಿನಲ್ಲೇ ಇರುವ ಕಾರಣ, ಪೌತಿ ಖಾತೆ ಅಭಿಯಾನದ ಮೂಲಕ ವಾರಸುದಾರರ ಹೆಸರಿಗೆ ಜಮೀನು ನೋಂದಣಿ ಮಾಡುವ ಕಾರ್ಯಕ್ಕೆ ಕಂದಾಯ ಇಲಾಖೆ ಮುಂದಾಗಿದೆ. ಮಂಗಳವಾರ ನಗರದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಈ ಹಿಂದೆ ಪೌತಿ ಖಾತೆ ಅಭಿಯಾನ ರಾಜ್ಯದಲ್ಲಿ ನಡೆದಿತ್ತಾದರೂ ನಿರೀಕ್ಷಿತ ಮಟ್ಟದಲ್ಲಿ ಜಾರಿಗೆ ಬಂದಿಲ್ಲ. ಹೀಗಾಗಿ, ಮೃತರ ಹೆಸರಿನಲ್ಲಿ ಉಳಿದಿರುವ ಜಮೀನಿನ ದಾಖಲೆಗಳನ್ನು ವಾರಸುದಾರರಿಗೆ ವರ್ಗಾವಣೆ ಮಾಡುವ

ರಾಜ್ಯದಲ್ಲಿ‌ ಪೌತಿ ಖಾತೆ ಅಭಿಯಾನ| ಮನೆ ಬಾಗಿಲಿಗೇ ಬಂದು ನೋಂದಣಿ ಪ್ರಕ್ರಿಯೆ Read More »

ಗೃಹಲಕ್ಷ್ಮಿ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ

ಸಮಗ್ರ ನ್ಯೂಸ್: ಆಶಾ ಕಾರ್ಯಕರ್ತೆಯೊಬ್ಬರು ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು 24 ಸಾವಿರ ಹಣವನ್ನು ಶಾಲೆಗೆ ಅಭಿವೃದ್ದಿಗೆ ನೀಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐರಣಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ಅವರು ಸರ್ಕಾರ ಗೃಹಲಕ್ಷ್ಮಿ ಯೋಜನೆ ಹಣವನ್ನು ಉಳಿಸಿ 24,000 ಹಣವನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ದಿಗೆ ನೀಡಿದ್ದಾರೆ. ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಕಂಡು ಬಂತು. ದೂರದ ಶುದ್ದ ಘಟಕದಿಂದ ನೀರು ತರುತ್ತಿದ್ದರು. ಮಕ್ಕಳಿಗೆ

ಗೃಹಲಕ್ಷ್ಮಿ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ Read More »

ಕದ್ದ ಹಣದಲ್ಲಿ ಪ್ರೇಯಸಿಗೆ 3 ಕೋಟಿ ವೆಚ್ಚದ ಮನೆ ನಿರ್ಮಿಸಿಕೊಟ್ಟ ಕಳ್ಳ

ಸಮಗ್ರ ನ್ಯೂಸ್: ಹಲವು ರಾಜ್ಯಗಳಲ್ಲಿ 150ಕ್ಕೂ ಹೆಚ್ಚು ಮನೆಗಳ್ಳತನ ನಡೆಸಿ, ಕದ್ದ ಹಣ ಹಾಗೂ ಚಿನ್ನಾಭರಣದಿಂದಲೇ ಪ್ರೇಯಸಿಗೆ ₹3 ಕೋಟಿ ವೆಚ್ಚದಲ್ಲಿ ಐಷಾರಾಮಿ ಮನೆ ನಿರ್ಮಿಸಿಕೊಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂತರ ರಾಜ್ಯ ಕಳ್ಳ, ಮಹಾರಾಷ್ಟ್ರದ ಸೊಲ್ಲಾಪುರದ ನಿವಾಸಿ ಪಂಚಾಕ್ಷರಿ ಸಂಗಯ್ಯಸ್ವಾಮಿ(37) ಎಂಬಾತನನ್ನು ಮಡಿವಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಕೋಲ್ಕತ್ತಾದಲ್ಲಿ ಪ್ರೇಯಸಿಗೆ ಮನೆ ನಿರ್ಮಿಸಿರುವ ವಿಷಯ ತನಿಖೆ ವೇಳೆ ಗೊತ್ತಾಗಿದೆ. ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿಯಿಂದ 181 ಗ್ರಾಂ ಚಿನ್ನದ ಗಟ್ಟಿ, 33

ಕದ್ದ ಹಣದಲ್ಲಿ ಪ್ರೇಯಸಿಗೆ 3 ಕೋಟಿ ವೆಚ್ಚದ ಮನೆ ನಿರ್ಮಿಸಿಕೊಟ್ಟ ಕಳ್ಳ Read More »

ಮಹಾಕುಂಭದಲ್ಲಿಂದು ಪ್ರಧಾನಿ ಮೋದಿ ಪುಣ್ಯ ಸ್ನಾನ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪುಣ್ಯಸ್ನಾನ ಮಾಡಲಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಮುಳುಗೇಳುವ ಸಲುವಾಗಿ ಮೋದಿ ಇಂದು ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ. ಮಹಾಕುಂಭಮೇಳಕ್ಕೆ ಆಗಮಿಸುವವರಿಗೆ ಕಲ್ಪಿಸಿರುವ ವ್ಯವಸ್ಥೆಗಳನ್ನು ಪರಿಶೀಲಿಸಲಿರುವ ಪ್ರಧಾನಿ ಬಳಿಕ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪ್ರಧಾನಿ ಜೊತೆಗಿರುತ್ತಾರೆ. ಕೆಲವು ಪ್ರಮುಖ ಅಖಾಡಗಳ ಸಾಧು ಸಂತರೊಂದಿಗೂ ಮೋದಿ ಸಂವಾದನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಯಾಗ್‌ರಾಜ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಮೋದಿ ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ

ಮಹಾಕುಂಭದಲ್ಲಿಂದು ಪ್ರಧಾನಿ ಮೋದಿ ಪುಣ್ಯ ಸ್ನಾನ Read More »

ಪುತ್ತೂರು: ಭೀಕರ ರಸ್ತೆ ಅಪಘಾತ| ಖಾಸಗಿ ವಾಹಿನಿಯ ಛಾಯಾಗ್ರಾಹಕ ದುರ್ಮರಣ

ಸಮಗ್ರ ನ್ಯೂಸ್: ಪುತ್ತೂರಿನ ಹೊರವಲಯ ಮುರ ಎಂಬಲ್ಲಿ ನಿನ್ನೆ (ಫೆ 4) ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಚೇತನ್‌ ಕೆಮ್ಮಿಂಜೆ ಮೃತಪಟ್ಟವರು ಎಂದು ವರದಿಯಾಗಿದೆ. ಇವರು ಖಾಸಗಿ ವಾಹಿನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಬೈಕ್‌ ಹಾಗೂ ಆಟೋ ರಿಕ್ಷಾ ಮಧ್ಯೆ ಈ ಅಪಘಾತ ಸಂಭವಿಸಿದೆ. ಬೈಕ್‌ ನಲ್ಲಿ ಚೇತನ್‌ ಜತೆಗೆ ಇನ್ನೋರ್ವ ಬಾಲಕ ಕೂಡ ಇದ್ದ ಎಂದು ತಿಳಿದು ಬಂದಿದೆ. ಚೇತನ್‌

ಪುತ್ತೂರು: ಭೀಕರ ರಸ್ತೆ ಅಪಘಾತ| ಖಾಸಗಿ ವಾಹಿನಿಯ ಛಾಯಾಗ್ರಾಹಕ ದುರ್ಮರಣ Read More »

ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಹಾಲುಮಡ್ಡಿ ಮರ; ಸವಾರ ಗಂಭೀರ

ಸಮಗ್ರ ನ್ಯೂಸ್. ಚಲಿಸುತ್ತಿದ್ದ ಬೈಕ್ ಮೇಲೆ ಹಾಲು ಮಡ್ಡಿ (ಧೂಪ) ಮರ ಬಿದ್ದು ಬೈಕ್‌ ಸವಾರ ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ(ಫೆ.4) ಸಂಜೆ ನಡೆದಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಅದಾದ ಬಳಿಕ ಸಾರ್ವಜನಿಕರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಒತ್ತಾಯಿಸಿದ್ದರು. ಇದೀಗ ಮತ್ತೆ ಅಂತಹುದೇ ಘಟನೆ

ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಹಾಲುಮಡ್ಡಿ ಮರ; ಸವಾರ ಗಂಭೀರ Read More »

ದ.ಕ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಚಿಕನ್ ಪಾಕ್ಸ್ ಹಾವಳಿ| ಆತಂಕದಲ್ಲಿ ಪೋಷಕರು

ಸಮಗ್ರ ನ್ಯೂಸ್: ದಕ್ಷಿಣಕನ್ನಡದಲ್ಲಿ ವಿವಿಧ ಶಾಲೆಗಳಲ್ಲಿ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಸೋಂಕು ದೃಢಪಟ್ಟಿದೆ. ದಕ್ಷಿಣಕನ್ನಡ ಜಿಲ್ಲೆಯ ಕಡಬ ಒಂದೇ ತಾಲೂಕಿನ ವಿವಿಧ ಶಾಲೆಗಳಲ್ಲಿ ಒಟ್ಟು 21 ಮಕ್ಕಳಿಗೆ ಈ ಒಂದು ಚಿಕನ್ ಪಾಕ್ಸ್ ದೃಢಪಟ್ಟಿದೆ. ಹಾಗಾಗಿ ಮಕ್ಕಳ ಪೋಷಕರಲ್ಲಿ ಇದೀಗ ಆತಂಕ ಮನೆ ಮಾಡಿದೆ. ರೋಗ ಹರಡಿರುವ ಶಾಲೆಗಳ ಆಡಳಿತ ಮಂಡಳಿಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಆದೇಶ ನೀಡಿದೆ. ರೋಗ ಕಡಿಮೆಯಾಗುವವರೆಗೂ ಮಕ್ಕಳಿಗೆ ರಜೆ ನೀಡುವಂತೆ ಮತ್ತು ಮಕ್ಕಳನ್ನು ಶಾಲೆಗೆ ಕಳುಹಿಸದಂತೇ ಶಾಲೆಗಳಿಗೆ

ದ.ಕ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಚಿಕನ್ ಪಾಕ್ಸ್ ಹಾವಳಿ| ಆತಂಕದಲ್ಲಿ ಪೋಷಕರು Read More »

ದ.ಕ ಜಿಲ್ಲಾ ಪಂಚಾಯತ್, ಕಡಬ ತಾ.ಪಂಚಾಯತ್, ಆಲಂಕಾರು ಗ್ರಾ.ಪಂ‌ಗೆ ನರೇಗಾ ಪ್ರಶಸ್ತಿ| ಹರ್ಷ ವ್ಯಕ್ತಪಡಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕಡಬ ತಾಲೂಕು ಪಂಚಾಯತ್ ಮತ್ತು ಅಲಂಕಾರು ಗ್ರಾಮ ಪಂಚಾಯತ್‌ಗಳಿಗೆ 2023-24 ನೇ ಸಾಲಿನ ರಾಜ್ಯ ಮಟ್ಟದ ನರೇಗಾ ಪ್ರಶಸ್ತಿಗಳು ಲಭಿಸಿರುವುದು ಅತ್ಯಂತ ಹೆಮ್ಮೆಯ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಮನ್ನಣೆಯು ಮಾನವ ಕೆಲಸದ ದಿನಗಳನ್ನು ಹೆಚ್ಚಿಸುವಲ್ಲಿ ಅತ್ಯುತ್ತಮ, ಮಹಿಳೆಯರ ಭಾಗವಹಿಸುವಿಕೆ, ಕೂಲಿ ಪಾವತಿ, ಕಾಮಗಾರಿ ಮುಕ್ತಾಯಗೊಳಿಸುವಿಕೆ, ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳು ಮತ್ತು ಆಡಳಿತದಲ್ಲಿ ಗಮನಾರ್ಹ ಪ್ರಗತಿಗೆ ಸಾಕ್ಷಿಯಾಗಿದೆ ಎಂದಿದ್ದಾರೆ.

ದ.ಕ ಜಿಲ್ಲಾ ಪಂಚಾಯತ್, ಕಡಬ ತಾ.ಪಂಚಾಯತ್, ಆಲಂಕಾರು ಗ್ರಾ.ಪಂ‌ಗೆ ನರೇಗಾ ಪ್ರಶಸ್ತಿ| ಹರ್ಷ ವ್ಯಕ್ತಪಡಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ Read More »

ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ ಸೀಸನ್​ 11 ರ ಸ್ಪರ್ಧಿಯಾಗಿ ರಾಜ್ಯಾದ್ಯಂತ ಸಖತ್ ಫೇಮಸ್ ಆಗಿದ್ದ ಗೋಲ್ಡ್ ಸುರೇಶ್ ಆಸ್ಪತ್ರೆಗೆ ಅಡ್ಮಿಟ್‌ ಆಗಿದ್ದಾರೆ. ಗೋಲ್ಡ್ ಸುರೇಶ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗೋಲ್ಡ್ ಸುರೇಶ್ ಆಸ್ಪತ್ರೆಯಲ್ಲಿ ಮಲಗಿರುವ ಫೋಟೋ ಹಾಗೂ ವಿಡಿಯೋ ವೈರಲ್‌ ಆಗಿವೆ. ಗೋಲ್ಡ್ ಸುರೇಶ್ ಅವರು ಕಾಲು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೇ ಗೋಲ್ಡ್ ಸುರೇಶ್ ಕಾಲಿಗೆ ಏಟಾಗಿತ್ತು. ಟಾಸ್ಕ್ ಆಡುವಾಗ ಪೆಟ್ಟು ಬಿದ್ದಿತ್ತು. ಕಾಲು ನೋವು ಹೆಚ್ಚಾಗಿದ್ದರಿಂದ ಗೋಲ್ಡ್

ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು Read More »