February 2025

ರಾಜ್ಯದ ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಬ್ಯಾನ್| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಲಾಗುವುದು. ಈ ಬಗ್ಗೆ ಶೀಘ್ರವೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ಲಾಸ್ಟಿಕ್ ಬಳಸಿದರೆ ವಿಧಿಸುವ ದಂಡ ಹಾಗೂ ಮುನ್ನೆಚ್ಚರಿಕೆ ಬಗ್ಗೆ ಇನ್ನೆರಡು ದಿನದಲ್ಲಿ ಅಧಿಕೃತವಾಗಿ […]

ರಾಜ್ಯದ ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಬ್ಯಾನ್| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ವಿವಾದಾತ್ಮಕ ವಕ್ಫ್(ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿಯ ಆಧಾರದ ಮೇಲೆ ವಿವಾದಾತ್ಮಕ ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಕೇಂದ್ರ ಸಚಿವ ಸಂಪುಟವು ಅನುಮೋದಿಸಿದೆ ಎಂದು ವರದಿಯಾಗಿದೆ. ಫೆ.13ರಂದು ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಯನ್ನು, ಫೆ.19ರಂದು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. 2025 ರ ಬಜೆಟ್ ಅಧಿವೇಶನದ ಮೊದಲಾರ್ಧದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ವರದಿಯನ್ನು ಮಂಡಿಸಲಾಯಿತು. ಪ್ರತಿಪಕ್ಷಗಳ ಗದ್ದಲದ ನಡುವೆ ಎರಡೂ ಸದನಗಳಲ್ಲಿ ಕಲಾಪಗಳನ್ನು ಸ್ವಲ್ಪ ಸಮಯದವರೆಗೆ ಮುಂದೂಡಲಾಯಿತು.ವಿರೋಧ ಪಕ್ಷದ ಸಂಸದರು ತಮ್ಮ ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಜೆಪಿಸಿ ವರದಿಯಿಂದ ತಿರುಚಲಾಗಿದೆ

ವಿವಾದಾತ್ಮಕ ವಕ್ಫ್(ತಿದ್ದುಪಡಿ) ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ Read More »

ಹವಾಮಾನ ವರದಿ|ಕರಾವಳಿ ಕರ್ನಾಟಕದಲ್ಲಿ ಹವಾಮಾನ ಬದಲಾವಣೆ| ಮಾ.03ರವರೆಗೆ ಶಾಖದ ಅಲೆ ಎಚ್ಚರಿಕೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಹವಾಮಾನ ಭಾರೀ ಬದಲಾವಣೆಗಳು ಆಗುತ್ತಿವೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಶಾಖದ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ. ಅಲ್ಲದೆ ವಿವಿಧ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಸಹ ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದಲ್ಲಿ ಕಳೆದ 15 ದಿನಗಳಿಂದ ಬಿಸಿಲು ಹೆಚ್ಚಳವಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಕಳೆದ 1 ತಿಂಗಳಿನಿಂದಲೂ ಚಳಿ ತೀವ್ರ ಕಡಿಮೆಯಾಗಿದ್ದು. ಬಿಸಿಲಿನ

ಹವಾಮಾನ ವರದಿ|ಕರಾವಳಿ ಕರ್ನಾಟಕದಲ್ಲಿ ಹವಾಮಾನ ಬದಲಾವಣೆ| ಮಾ.03ರವರೆಗೆ ಶಾಖದ ಅಲೆ ಎಚ್ಚರಿಕೆ Read More »

ಅಸ್ಸಾಂನಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ

ಸಮಗ್ರ ನ್ಯೂಸ್: ಭಾರತದಲ್ಲಿ ಅತಿ ಹೆಚ್ಚು ಭೂಕಂಪ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಅಸ್ಸಾಂನಲ್ಲಿ ಇದೀಗ ಮತ್ತೊಮ್ಮೆ ಭೂಕಂಪನ ಸಂಭವಿಸಿದೆ. ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೂಕಂಪದ ಅನುಭವವಾಗಿದೆ. ತೀವ್ರತೆ ರಿಕ್ಟರ್ ಮಾಪಕದಲ್ಲಿ 5.1 ಎಂದು ದಾಖಲಾಗಿದೆ. ಗುವಾಹಟಿ ಮತ್ತು ರಾಜ್ಯದ ಇತರ ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಭೂಕಂಪನವು ಬೆಳಗಿನ ಜಾವ 2.25 ಕ್ಕೆ 16 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಅಸ್ಸಾಂನಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ Read More »

ಮಹಾಕುಂಭಮೇಳಕ್ಕೆ ಅಧಿಕೃತ ತೆರೆ| 45 ದಿನಗಳಲ್ಲಿ ದಾಖಲೆಯ 65 ಕೋಟಿ ಜನರಿಂದ ಪುಣ್ಯಸ್ನಾನ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ನಡೆದ ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಎಂದು ಖ್ಯಾತಿ ಪಡೆದಿರುವ ಮಹಾಕುಂಭ ಮೇಳಕ್ಕೆ ಮಹಾಶಿವರಾತ್ರಿ ದಿನವಾದ ಇಂದು ತೆರೆ ಬಿದ್ದಿದೆ. ಬುಧವಾರ ತ್ರಿವೇಣಿ ಸಂಗಮದಲ್ಲಿ ಕೊನೆಯ ಅಮೃತ ಸ್ನಾನ ನಡೆದಿದೆ. 45 ದಿನಗಳ ಕಾಲ ನಡೆದ ಮಹಾಕುಂಭ ಮೇಳಕ್ಕೆ ತೆರೆ ಬಿದ್ದಿದೆ. ಕೊನೆಯ ದಿನವಾದ ಇಂದು 1.44 ಕೋಟಿ ಜನ ಪುಣ್ಯ ಸ್ನಾನ ಮಾಡಿದ್ದಾರೆ. ಜನವರಿ 13ರಂದು ಶುರುವಾದ ಮಹಾಕುಂಭಮೇಳದಲ್ಲಿ ಇದುವರೆಗೆ 66 ಕೋಟಿ

ಮಹಾಕುಂಭಮೇಳಕ್ಕೆ ಅಧಿಕೃತ ತೆರೆ| 45 ದಿನಗಳಲ್ಲಿ ದಾಖಲೆಯ 65 ಕೋಟಿ ಜನರಿಂದ ಪುಣ್ಯಸ್ನಾನ Read More »

ಯೋಗಿ ಸರ್ಕಾರಕ್ಕೆ ಫುಲ್ ಮಾರ್ಕ್ಸ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಪ್ರಯೋಗ್ ರಾಜ್ ನಲ್ಲಿ ನಡೆದ ಮಹಾ ಕುಂಭಮೇಳ ಇಂದಿಗೆ ಸಂಪನ್ನಗೊಂಡಿದೆ. ಈ ಹಿಂದೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ಕೆಲವು ಹಿರಿಯ ಸಂತರೊಂದಿಗೆ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಇದೇ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು,ಗಂಗಾನದಿಯಲ್ಲಿ ಸ್ನಾನ ಮಾಡಿದರೆ ಬಡತನವು ಅಂತ್ಯಗೊಳ್ಳುತ್ತದೆಯೇ ಎಂದು ಪ್ರಶ್ನಿಸಿದ್ದರು. ಬಿಜೆಪಿ ನಾಯಕರು ಕ್ಯಾಮೆರಾಗಳಿಗೆ ಪೋಸ್ ನೀಡಲು ಸ್ನಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ ಎಂದು ಹೇಳಿದ್ದರು. ಖರ್ಗೆ ಅವರ ಈ ಮಾತುಗಳು ಭಾರೀ

ಯೋಗಿ ಸರ್ಕಾರಕ್ಕೆ ಫುಲ್ ಮಾರ್ಕ್ಸ್ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್ Read More »

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ| ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ.  ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಹಂಪಿ ಉತ್ಸವಕ್ಕೆ ದೇಶ ವಿದೇಶಗಳಿಂದ ಸಾಗರೋಪಾದಿಯಲ್ಲಿ  ಜನರು ಆಗಮಿಸಿ ಸಾಕ್ಷಿಯಾಗುತ್ತಿದ್ದು, 2025ರ  ಹಂಪಿ ಉತ್ಸವವು ಫೆಬ್ರುವರಿ  28 ರಿಂದ ಮಾರ್ಚ್  2

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ| ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ Read More »

ಮಹಾಕುಂಭದಿಂದ ಹಿಂತಿರುಗುವಾಗ ಅಪಘಾತ| ಜೆಎಂಎಂ ಸಂಸದೆ ಮಹುವಾ ಮಾಜಿ ಗಂಭೀರ

ಸಮಗ್ರ ನ್ಯೂಸ್: ಮಹಾಕುಂಭ ಮೇಳದಿಂದ ಹಿಂದಿರುಗುವಾಗ ಭೀಕರ ಅಪಘಾತದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸಂಸದೆ ಮಹುವಾ ಮಾಜಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಅವರ ಕುಟುಂಬ ಸದಸ್ಯರು ಕೂಡ ಗಾಯಗೊಂಡಿದ್ದಾರೆ. ಅವರ ಕಾರು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ. ಅವರನ್ನು ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದೆ. ಜೆಎಂಎಂನ ರಾಜ್ಯಸಭಾ ಸಂಸದೆ ಮಹುವಾ ಮಾಂಜಿ ಮಹಾ ಕುಂಭ ಮೇಳದಲ್ಲಿ ಸ್ನಾನ

ಮಹಾಕುಂಭದಿಂದ ಹಿಂತಿರುಗುವಾಗ ಅಪಘಾತ| ಜೆಎಂಎಂ ಸಂಸದೆ ಮಹುವಾ ಮಾಜಿ ಗಂಭೀರ Read More »

ಹೊರನಾಡು ಅರಣ್ಯ ಭಾಗಗಳಲ್ಲಿ ಕಾಳ್ಗಿಚ್ಚು| ಹತ್ತಾರು ಎಕ್ರೆ ಅರಣ್ಯ ಸಂಪತ್ತು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸಮೀಪದ ಬಲಿಗೆ ಮತ್ತು ಮಾವಿನಹೊಲ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಫೆ.25 ರಂದು ಸಂಭವಿಸಿದೆ. ಬೆಂಕಿಯಿಂದ ಹತ್ತಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಕರಕಲಾಗಿದೆ. ಗುಡ್ಡ ಪ್ರದೇಶದಲ್ಲಿ ಬೆಂಕಿ ಹಬ್ಬಿದ ಪರಿಣಾಮ, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ವಾಹನಗಳು ಹೋಗಲು ಸಾಧ್ಯವಿಲ್ಲದ ಸ್ಥಳಗಳಲ್ಲಿ, ಸೊಪ್ಪು ಮತ್ತು ಇತರ ಸಾಧನಗಳನ್ನು ಬಳಸಿಕೊಂಡು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ,

ಹೊರನಾಡು ಅರಣ್ಯ ಭಾಗಗಳಲ್ಲಿ ಕಾಳ್ಗಿಚ್ಚು| ಹತ್ತಾರು ಎಕ್ರೆ ಅರಣ್ಯ ಸಂಪತ್ತು ಬೆಂಕಿಗಾಹುತಿ Read More »

ಕರಾವಳಿ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ| ಮಂಗಳೂರು ಸೆಂಟ್ರಲ್ – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯ ರೋಡ್ ವರೆಗೆ ವಿಸ್ತರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದಿದೆ. ಬಹಳ ವರ್ಷಗಳ ಬೇಡಿಕೆಯಾಗಿದ್ದ ಮಂಗಳೂರು- ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರೋಡ್ ತನಕ ವಿಸ್ತರಣೆ ಮಾಡಲು ರೈಲ್ವೆ ಇಲಾಖೆ ಅನುಮತಿ ನೀಡಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವರಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಈ ರೈಲು ಸೇವೆ ವಿಸ್ತರಣೆಯಿಂದ ಪ್ರತಿನಿತ್ಯ ಸಂಚಾರ ನಡೆಸುವ ಸಾವಿರಾರು ಜನರಿಗೆ ಅನುಕೂಲವಾಗಲಿದೆ. ಸುಮಾರು 18 ವರ್ಷಗಳಿಂದ ಮಂಗಳೂರು-ಕಬಕ ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರೋಡ್ ತನಕ

ಕರಾವಳಿ ರೈಲ್ವೆ ಪ್ರಯಾಣಿಕರಿಗೆ ಶುಭಸುದ್ದಿ| ಮಂಗಳೂರು ಸೆಂಟ್ರಲ್ – ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯ ರೋಡ್ ವರೆಗೆ ವಿಸ್ತರಣೆ Read More »