February 2025

ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ

ಸಮಗ್ರ ನ್ಯೂಸ್: ಬೆಂಗಳೂರು ನಗರದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೌದು ತೆರಿಗೆ ಇಲಾಖೆ (IT) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಎಂಜಿ ರಸ್ತೆಯಲ್ಲಿನ ಪ್ರೆಸ್ಟೀಜ್ ಗ್ರೂಪ್ ​ ಮುಖ್ಯ ಕಚೇರಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಸುಮಾರು 50 ಕ್ಕೂ ಹೆಚ್ಚು ಐಟಿ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರೆಸ್ಟೀಜ್ ಗ್ರೂಪ್​ನಿಂದ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಎಂ.ಜಿ ರಸ್ತೆಯ ಪ್ರೇಸ್ಟಿಜ್ ಮುಖ್ಯ ಕಚೇರಿ ಸೇರಿ ನಾಲ್ಕು ಕಡೆ ದಾಳಿ […]

ಬೆಂಗಳೂರಿನ ಪ್ರೆಸ್ಟೀಜ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ Read More »

ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ| ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್‌ಪ್ರೆಸ್‌ ರಸ್ತೆ ಸದ್ಯ ಟೋಲ್ ಫ್ರೀ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಅತಿದೊಡ್ಡ ಎಕ್ಸ್‌ಪ್ರೆಸ್‌ ವೇನಲ್ಲಿ ಒಂದಾಗಿರುವ ಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಸಂಚಾರಕ್ಕೆ ಮುಕ್ತವಾಗಿದೆ. ಮೂರು ರಾಜ್ಯಗಳನ್ನು ಒಳಗೊಂಡ ಎಕ್ಸ್‌ಪ್ರೆಸ್‌ ವೇ ಮಾರ್ಗ ಇದಾಗಿದೆ. ಕರ್ನಾಟಕ ರಾಜ್ಯ ಭಾಗದ 71 ಕಿಲೋ ಮೀಟರ್ ಮಾರ್ಗದ ಕಾಮಗಾರಿ ಸಂಪೂರ್ಣ ಮುಕ್ತಾಯವಾಗಿದೆ. ಮಾರ್ಗಸೂಚಿ ಫಲಕಗಳು, ನಾಮಫಲಕಗಳು, ಡಿಜಿಟಲ್ ಫಲಕಗಳು ಸೇರಿದಂತೆ ಕೆಲಸಗಳು ಮುಗಿದಿದ್ದು, ತಾತ್ಕಾಲಿಕವಾಗಿ ಟೋಲ್ ಇಲ್ಲದೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹೊಸಕೋಟೆಯ ಇಂಟರ್ ಚೇಂಜ್‌ನಿಂದ ಚೆನ್ನೈವರೆಗೆ 280 ಕಿ.ಮೀ ಉದ್ದದ ಎಕ್ಸ್‌ಪ್ರೆಸ್ ವೇ

ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ| ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್‌ಪ್ರೆಸ್‌ ರಸ್ತೆ ಸದ್ಯ ಟೋಲ್ ಫ್ರೀ Read More »

ಗುಂಡ್ಯ: ಚಲಿಸುತ್ತಿದ್ದ ಲಾರಿಯಿಂದ ಏಕಾಏಕಿ ಹೊರಜಿಗಿದ ನಿರ್ವಾಹಕ| ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಫೆ.25ರಂದು ಮುಂಜಾನೆ ನಡೆದಿದೆ. ತಮಿಳುನಾಡು ಚಿನ್ನತೂಬುರ್ ನಾಗಪಟ್ಟಿನಮ್ ನಿವಾಸಿ ಲಕ್ಷ್ಮಣನ್ ಸೆಂಗುತ್ತುವನ್(46ವ.) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ತಮಿಳುನಾಡಿನ ಕೃಷ್ಣಗಿರಿಯಿಂದ ಕಲ್ಲಂಗಡಿಯನ್ನು ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯು ಗುಂಡ್ಯ ಸಮೀಪದ ಅಡ್ಡಹೊಳೆ ತಲುಪುತಿದ್ದಂತೆ ಏಕಾಏಕಿಯಾಗಿ ನಿರ್ವಾಹಕ ಲಾರಿಯಿಂದ ಜಿಗಿದು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು

ಗುಂಡ್ಯ: ಚಲಿಸುತ್ತಿದ್ದ ಲಾರಿಯಿಂದ ಏಕಾಏಕಿ ಹೊರಜಿಗಿದ ನಿರ್ವಾಹಕ| ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವು Read More »

ಸುಳ್ಯ: ಎಂ ಸಿ ಸಿ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ|ರಂಜಿತ್ ಅಧ್ಯಕ್ಷರಾಗಿ ಪುನರಾಯ್ಕೆ

ಸುಳ್ಯ: ಮಾರ್ನಿಂಗ್ ಕ್ರಿಕೆಟ್ ಕ್ಲಬ್(ಎಂ.ಸಿ.ಸಿ)ನ ಇದರ ನೂತನ ಪದಾಧಿಕಾರಿಗಳ ನೇಮಕ ಆಯ್ಕೆ ಹಾಗೂ ಮಹಾಸಭೆ ಫೆ.23 ರಂದು ನಡಯಿತು. ಹಾಲಿ ಅಧ್ಯಕ್ಷ ರಂಜಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೆಕ್ಕ ಪತ್ರ ಮಂಡನೆ ಮಾಡಿ ನೂತನ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅದ್ಯಕ್ಷರಾಗಿ ರಂಜಿತ್ ಕುಮಾರ್ ಪುನರಾಯ್ಕೆ ಮಾಡಲಾಯಿತು.ಕಾರ್ಯದರ್ಶಿಯಾಗಿ ಬಾಲಕುಮಾರನ್, ಕೋಶಾಧಿಕಾರಿ ಯಾಗಿ ಆಸೀಫ್ ಜಯನಗರ, ಉಪಾಧ್ಯಕ್ಷ ಹನೀಫ್ ಅವರನ್ನು ಆಯ್ಕೆ ಮಾಡಲಾಯಿತು. ವೇದಿಕೆಯಲ್ಲಿ ಅಧ್ಯಕ್ಷ ರಂಜಿತ್, ಕಾರ್ಯದರ್ಶಿ ಜುಬೀರ್ (ಉಬ್ಬಿ)

ಸುಳ್ಯ: ಎಂ ಸಿ ಸಿ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ|ರಂಜಿತ್ ಅಧ್ಯಕ್ಷರಾಗಿ ಪುನರಾಯ್ಕೆ Read More »

ಮಾಣಿ-ಸಂಪಾಜೆ ರಾ.ಹೆದ್ದಾರಿ ವಿಸ್ತರಣೆ ಡಿಪಿಆರ್ ಗೆ ರಾಜ್ಯ ಸರ್ಕಾರದ ಅನುಮೋದನೆ – ಸಂಸದ ಚೌಟ

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್‌ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಅವರು ಖುದ್ದು ಮನವಿ ಮಾಡಿದ್ದರು. ಈ

ಮಾಣಿ-ಸಂಪಾಜೆ ರಾ.ಹೆದ್ದಾರಿ ವಿಸ್ತರಣೆ ಡಿಪಿಆರ್ ಗೆ ರಾಜ್ಯ ಸರ್ಕಾರದ ಅನುಮೋದನೆ – ಸಂಸದ ಚೌಟ Read More »

ಜಾಗ್ವಾರ್ ಯುದ್ದ ವಿಮಾನಕ್ಕೆ ಮಂಗಳೂರಿನ ಹುಡುಗಿ ಸಾರಥ್ಯ| ಮೊದಲ ಬಾರಿಗೆ ಅವಕಾಶ ಪಡೆದ‌ ತನುಷ್ಕಾ

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧ ವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್‌ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಇದೇ ಮೊದಲು ಬಾರಿಗೆ ಮಹಿಳೆಯೊಬ್ಬರು ಪಡೆದಿದ್ದಾರೆ. ಮಂಗಳೂರು ಮೂಲದ ಫ್ಲೆಯಿಂಗ್‌ ಆಫೀಸರ್‌ ತನುಷ್ಕಾ ಸಿಂಗ್‌ ಅವರಿಗೆ‌ ಅಂಥಹ ಅವಕಾಶ ಸಿಕ್ಕಿದೆ. ಇವರು ಜಾಗ್ವಾರ್‌ ಯುದ್ಧ ವಿಮಾನ ಸ್ಕ್ವಾಡ್ರನ್‌ನಲ್ಲಿ ಪೈಲಟ್‌ ಆಗಿ ಆಯ್ಕೆಯಾಗಿದ್ದಾರೆ. ಜಾಗ್ವಾರ್‌ ಯುದ್ಧ ವಿಮಾನವನ್ನು ಇದುವರೆಗೆ ಮಹಿಳಾ ಪೈಲಟ್‌ಗಳು ಶಾಶ್ವತ ನೆಲೆಯಲ್ಲಿ ಮುನ್ನಡೆಸಿಲ್ಲ. ತನುಷ್ಕಾ ಮಿಲಿಟರಿ ಹಿನ್ನೆಲೆಯ ಕುಟುಂಬದವರು. ಅವರ ತಂದೆ, ಅಜ್ಜ

ಜಾಗ್ವಾರ್ ಯುದ್ದ ವಿಮಾನಕ್ಕೆ ಮಂಗಳೂರಿನ ಹುಡುಗಿ ಸಾರಥ್ಯ| ಮೊದಲ ಬಾರಿಗೆ ಅವಕಾಶ ಪಡೆದ‌ ತನುಷ್ಕಾ Read More »

ಬಂಗಾಳಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ| ಪ.ಬಂಗಾಳದ ವಿವಿಧೆಡೆ ಕಂಪಿಸಿದ ಭೂಮಿ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಮಂಗಳವಾರ ಮುಂಜಾನೆ 6.10ರ ಸುಮಾರಿಗೆ 5.1 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಪ್ರಕಟಿಸಿದೆ. ಸುಮಾರು 91 ಕಿಲೋಮೀಟರ್ ಆಳದಲ್ಲಿ ಈ ಕಂಪನ ಸಂಭವಿಸಿದ್ದು, ಇದರ ಕೇಂದ್ರ ಬಿಂದು 19.52 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 88.55 ಡಿಗ್ರಿ ಪೂರ್ವ ರೇಖಾಂಶಕ್ಕೆ ಇತ್ತು ಎಂದು ಅಧಿಕೃತ ಮೂಲಗಳು ಹೇಳಿವೆ. ಭೂಕಂಪದಿಂದ ಆಗಿರುವ ಹಾನಿಯ ಬಗ್ಗೆ ತಕ್ಷಣಕ್ಕೆ ಯಾವುದೇ ವರದಿಗಳು ಬಂದಿಲ್ಲ ಹಾಗೂ ಸುನಾಮಿ ಎಚ್ಚರಿಕೆಯನ್ನೂ ನೀಡಿಲ್ಲ. ಕೊಲ್ಕತ್ತಾ

ಬಂಗಾಳಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ| ಪ.ಬಂಗಾಳದ ವಿವಿಧೆಡೆ ಕಂಪಿಸಿದ ಭೂಮಿ Read More »

ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತನ್ನು ಬಿಹಾರದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಅವರು ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. 2019ರ ಫೆಬ್ರವರಿ 24ರಂದು ಪ್ರಾರಂಭಿಸಲಾದ ಈ ಯೋಜನೆಯು ಅರ್ಹ ಕೃಷಿ ಕುಟುಂಬಗಳಿಗೆ ವರ್ಷಕ್ಕೆ 6,000 ರೂ.ಗಳ ಆರ್ಥಿಕ ಸಹಾಯವನ್ನು ನೀಡುತ್ತದೆ. ಇಲ್ಲಿಯವರೆಗೆ, 18 ಕಂತುಗಳಲ್ಲಿ 11 ಕೋಟಿಗೂ ಹೆಚ್ಚು ರೈತರಿಗೆ 3.46 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವರ್ಗಾಯಿಸಲಾಗಿದೆ. ಪಿಎಂ ಕಿಸಾನ್

ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತು ಬಿಡುಗಡೆ Read More »

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ‌ ಸಾವು

ಸಮಗ್ರ ನ್ಯೂಸ್: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ಸಂಭವಿಸಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್‌ (16) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ಧಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ಈತ ತನ್ನ ಅಜ್ಜಿ ಮನೆಗೆಂದು ಬಂದವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಈ ಮೂಲಕ ದುರಂತ ಅಂತ್ಯ ಕಂಡಿದ್ದಾನೆ. ವೇಣೂರು ಪೊಲೀಸ್‌ ಠಾಣೆಯಲ್ಲಿ

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ‌ ಸಾವು Read More »

ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ಅವಘಡದಿಂದ ಮನೆ ಸಂಪೂರ್ಣ ಸುಟ್ಟು ಭಸ್ಮ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆಯಾಗಿದೆ. ಈ ದುರ್ಘಟನೆಯಲ್ಲಿ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಬಹುತೇಕ ನಾಶವಾಗಿದ್ದು, ಹತ್ತಾರು ಮೂಟೆ ಕಾಫಿ ಬೀಜಗಳು ಕೂಡಾ ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡದ ಸಂದರ್ಭದಲ್ಲಿ ಮನೆಯಲ್ಲಿ ಇದ್ದ ರೇಖಾ (36) ತೀವ್ರವಾಗಿ ಗಾಯಗೊಂಡು ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಡಿಗೆ ಮಾಡಲು ಸ್ಟವ್ ಹಚ್ಚುವ ವೇಳೆ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು,ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ

ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ಅವಘಡದಿಂದ ಮನೆ ಸಂಪೂರ್ಣ ಸುಟ್ಟು ಭಸ್ಮ Read More »