ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡದ ಶಾಸಕ ರಾಜು ಕಾಗೆ ಅವರ ಪುತ್ರಿ ಅಕಾಲಿಕವಾಗಿ ಮೃತಪಟ್ಟಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರಿಗೆ 36 ವರ್ಷ ವಯಸ್ಸಾಗಿತ್ತು. ಮಾರ್ಚ್ 2ರಂದು ರಾಜು ಕಾಗೆ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತಪಟ್ಟ ಕೃತಿಕಾ ಭರಮಗೌಡ ಕಾಗೆ ಅವರಿಗೆ ನಾಲ್ಕು ವರ್ಷದ ಹೆಣ್ಣು ಮಗಳಿದ್ದಾಳೆ. ಬೆಂಗಳೂರು ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.