ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಅಪಘಾತ: ಐವರು ಸಾವು

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

. Ad Widget . Ad Widget

ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಟಿಪ್ಪರ್​ ಡಿಕ್ಕಿಯಾದ ರಭಸಕ್ಕೆ ರಸ್ತೆ ಪಕ್ಕಕ್ಕೆ ಕಾರು ಉರುಳಿಬಿದ್ದಿದೆ. ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತದ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *