Ad Widget .

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು

ಸಮಗ್ರ ನ್ಯೂಸ್: ಯುವಕನ ಗಂಟಲಲ್ಲಿ ಮೀನು ಸಿಲುಕಿ ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಾಯಕುಳಂನಲ್ಲಿ‌ ನಡೆದಿದೆ.. ಮೃತನನ್ನು ಪುತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget .

ಈತ ಭಾನುವಾರ ಸಂಜೆ 4.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆದರ್ಶ್ ತನ್ನ ಸ್ನೇಹಿತರೊಂದಿಗೆ ಭತ್ತದ ಗದ್ದೆಯನ್ನು ಬರಿದು ಮಾಡಿ ಮೀನುಗಾರಿಕೆ ನಡೆಸುತ್ತಿದ್ದನು. ಈ ವೇಳೆ ಆತ ತನ್ನ ಬಾಯಿಯಲ್ಲಿ ಹಿಡಿದಿದ್ದ ಮೀನು ಜಾರಿ ಗಂಟಲಲ್ಲಿ ಸಿಲುಕಿಕೊಂಡಿದೆ.

Ad Widget . Ad Widget .

ಕೂಡಲೇ ಯುವಕನನ್ನು ಓಚಿರಾ ಬಳಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವನ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಆದರ್ಶ್‌ನ ಮೃತದೇಹವನ್ನು ಕಾಯಂಕುಳಂ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *