ಪುತ್ತೂರು: ಕೆಲ‌ ಗ್ರಾಮಗಳಲ್ಲಿ ಕಂಪಿಸಿದ ಭೂಮಿ? ಕ್ಷಣಕಾಲ ಆತಂಕ ನಿರ್ಮಾಣ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರೆಲ್ಲರೂ ಭಯಭೀತರಾಗಿ ಮನೆಯಿಂದ ಓಡಿ ಬಂದಿದ್ದಾರೆ. ಅಷ್ಟೇ ಅಲ್ಲದೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಮಾ.4 ರ ಸಂಜೆ ನಡೆದಿದೆ.

. Ad Widget . Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಮಾರು ಐದು ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದ್ದಾಗಿ ಸ್ಥಳೀಯ ಮಾಹಿತಿಗಳಿಂದ ತಿಳಿದುಬಂದಿದೆ. ಕೆಲ ಕಾಲ ಭೂಮಿ ಕಂಪಿಸಿದ್ದರಿಂದಾಗಿ ಜನರು ಭಯ ಭೀತರಾದರು ಎಂಬುದಾಗಿ ಹೇಳಲಾಗುತ್ತಿದೆ. ಆದರೆ ಪುತ್ತೂರು ವ್ಯಾಪ್ತಿಯ ಕಲ್ಲು ಕ್ವಾರಿಯಲ್ಲಿ ಸಂಗ್ರಹಿಸಿಟ್ಟಿದ್ದಂತ ಜಿಲೆಟಿನ್ ಕಡ್ಡಿಗಳು ಸ್ಪೋಟಗೊಂಡ ಪರಿಣಾಮ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ಹೇಳಲಾಗುತ್ತಿದ್ದು, ನಿಖರ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *