ಸಮಗ್ರ ನ್ಯೂಸ್: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಇದೀಗ ಆಟೋ ಮೀಟರ್ ದರ ಏರಿಕೆ ಮಾಡುವ ಎಲ್ಲಾ ಸಾಧ್ಯತೆಗಳಿವೆ. ಆಟೋ ಮೀಟರ್ ದರ ಹೆಚ್ವಳ ಮಾಡಿ ನಾಲ್ಕು ವರ್ಷ ಆಗಿದೆ. ಈಗ ಸಿಎನ್ಜಿ ಹಾಗೂ ಎಲ್ಪಿಜಿ ದರ ಹೆಚ್ಚಳವಾಗಿದೆ. ಹಾಗಾಗಿ ಬೆಂಗಳೂರು ಆಟೋ ಮೀಟರ್ ದರ ಹೆಚ್ಚಳಕ್ಕೆ ಚರ್ಚೆಗಳು ನಡೆದಿವೆ. ಕಳೆದ ವರ್ಷವೇ ಆಟೋ ಚಾಲಕ ಸಂಘಟನೆಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ದರ ಏರಿಕೆ ಮಾಡುವಂತೆ ಮನವಿ ಮಾಡಿದ್ದವು. ಈ ದರ ಏರಿಕೆ ಮಾಡುವ ಬಗ್ಗೆ ಚರ್ಚಿಸಲು ಮಾರ್ಚ್12 ರಂದು 11 ಗಂಟೆಗೆ ಇನ್ ಫೆಂಟ್ರಿ ರಸ್ತೆಯಲ್ಲಿರುವ.ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ.
ಸಭೆಯ ನಂತರ ಎಷ್ಟು ಏರಿಕೆ ಮಾಡಬೇಕೆಂಬುದು ತಿಳಿಯುತ್ತದೆ. ಒಂದು ಕಿ.ಮೀಗೆ 5 ರುಪಾಯಿ, ಎರಡು ಕಿಮೀಗೆ 10 ರುಪಾಯಿ ಏರಿಕೆ ಮಾಡುವಂತೆ ಆಟೋ ಸಂಘಟನೆಗಳು ಮನವಿ ಮಾಡಲಾಗಿದೆ. ಬೆಂಗಳೂರಲ್ಲಿ ಮಿನಿಮಮ್ ಆಟೋ ಮೀಟರ್ ದರ ಎರಡು ಕಿಮೀ ಗೆ 30 ರುಪಾಯಿ ಇದೆ. ಈ ಮಿನಿಮಮ್ ದರವನ್ನು 40 ರೂಪಾಯಿಗೆ ಏರಿಕೆ ಮಾಡುವಂತೆ ಮನವಿ ಮಾಡಿವೆ.