16ನೇ ದಾಖಲೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ.. ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ?

ಸಮಗ್ರ ನ್ಯೂಸ್: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು,  4.09 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಇದಾಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇನ್ನೂ ಸಿದ್ದರಾಮಯ್ಯ ಅವರು 16ನೇ ದಾಖಲೆ ಬಜೆಟ್ ಮಂಡಿಸಿದ್ದು, ಮಂಡಿ ನೋವಿನ ಕಾರಣ ಈ ಬಾರಿ ಸದನದಲ್ಲಿ ಕುಳಿತುಕೊಂಡೆ 3 ಗಂಟೆ 30 ನಿಮಿಷ ಬಜೆಟ್‌ ಮಂಡಿಸಿದ್ದಾರೆ.

Ad Widget .

ಯಾವ್ಯಾವ ಇಲಾಖೆಗೆ ಎಷ್ಟೆಷ್ಟು?

Ad Widget . Ad Widget .

ಈ ಬಾರಿಯ ಬಜೆಟ್ನಲ್ಲಿ ಗ್ಯಾರೆಂಟಿಗೆ 51 ಸಾವಿರ ಕೋಟಿ ರೂ. ಮೀಸಲು ಇಡಲಾಗಿದೆ. ಶಿಕ್ಷಣ ಇಲಾಖೆಗೆ 45,286 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಹಾಗೆಯೇ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಗೆ 34,955 ಕೋಟಿ, ಇಂಧನ ಇಲಾಖೆಗೆ 26,896 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಗೆ $26,735 ಕೋಟಿ, ನೀರಾವರಿ ಇಲಾಖೆಗೆ 22,181 ಕೋಟಿ, ನಗರಾಭಿವೃದ್ಧಿ & ವಸತಿ ಇಲಾಖೆಗೆ 21,405 ಕೋಟಿ ಹಾಗೂ ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 20,625 ಕೋಟಿ, ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಗೆ 17,473 ಕೋಟಿ ಮೀಸಲಿಟ್ರೆ, ಕಂದಾಯ ಇಲಾಖೆಗೆ 17,201 ಕೋಟಿ, ಸಮಾಜಕಲ್ಯಾಣ ಇಲಾಖೆಗೆ 16,955 ಕೋಟಿ, ಲೋಕೋಪಯೋಗಿ ಇಲಾಖೆಗೆ ₹11,841 ಕೋಟಿ ಅನುದಾನ ಕೊಡಲಾಗಿದೆ.

ಇನ್ನೂ ಆಹಾರ & ನಾಗರಿಕ ಸರಬರಾಜು ಇಲಾಖೆಗೆ 8,275 ಕೋಟಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 7145 ಕೋಟಿ, ಪಶುಸಂಗೋಪನೆ & ಮೀನುಗಾರಿಕೆ ಇಲಾಖೆಗೆ 3,977 ಕೋಟಿ ಹಾಗೂ ಇತರೆ ಇಲಾಖೆಗಳಿಗೆ 1 ಲಕ್ಷ 49 ಸಾವಿರದ 857 ಕೋಟಿ ಅನುದಾನ ಘೋಷಣೆಯಾಗಿದೆ.

Leave a Comment

Your email address will not be published. Required fields are marked *